ipl gujrat defeated delhi
ಅಲಹಾಬಾದ್: ಜೋಸ್ ಬಟ್ಲರ್ ಹಾಗೂ ರುದರ್‌ಫರ್ಡ್ ಅವರ ಶತಕದಾಟದ ಬಲದಿಂದ ಟೇಬಲ್ ಟಾಪರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗುಜರಾತ್ ಜೈಂಟ್ಸ್ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿ ಎದುರಾಳಿ ತಂಡಕ್ಕೆ 204 ರನ್ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 19.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.
ಡೆಲ್ಲಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ ಉತ್ತಮ ಆರಂಭ ದೊರೆಯಿತು. ಅಭಿಷೇಕ್ ಪೋರೆಲ್ 18(9), ಕರುಣ್ ನಾಯರ್ 31(18) ರನ್ ಗಳಿಸಿ ಔಟಾದರು.
ಬಳಿಕ ಬಂದ ಕೆ.ಎಲ್. ರಾಹುಲ್ 28(14), ನಾಯಕ ಅಕ್ಷರ್ ಪಟೇಲ್ 39(32) ರನ್ ಗಳಿಸಿದರು. ಉಳಿದಂತೆ ಸ್ಟಬ್ಸ್ 31(21), ಅಶುತೋಶ್ ಶರ್ಮಾ 37(19), ವಿಪ್ರಾಜ್ ಡಕ್‌ಔಟ್, ಫರೆರಿಯಾ 1(3) ರನ್ ಗಳಿಸಿದರು.
ಮಿಚೆಲ್ ಸ್ಟಾರ್ಕ್ ಹಾಗೂ ಕುಲ್ದೀಪ್ ಯಾದವ್ ಔಟಾಗದೇ 2(2) ಮತ್ತು 4(1) ರನ್ ಗಳಿಸಿದರು.
ಗುಜರಾತ್ ಪರ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದರು. ಇಶಾಂತ್ ಶರ್ಮಾ, ಸಿರಾಜ್, ಅರ್ಶದ್ ಖಾನ್ ಹಾಗೂ ಸಾಯ್ ಕಿಶೋರ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಗುಜರಾತ್ ಇನ್ನಿಂಗ್ಸ್: ಬೃಹತ್ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಆರಂಭಿಕ ಆಘಾತ ಎದುರಾಯಿತು. ನಾಯಕ ಗಿಲ್ 7(5) ರನ್ ಗಳಿಸಿ ಇಲ್ಲದ ರನ್ ಕದಿಯಲು ಹೋಗಿ ಔಟಾದರು. ಸಾಯ್ ಸುದರ್ಶನ್ 36(21) ರನ್ ಕಲೆಹಾಕಿ ಹೊರನಡೆದರು.
ಬಳಿಕ ಜೊತೆಯಾದ ಜೋಸ್ ಬಟ್ಲರ್ ಹಾಗೂ ರುದರ್‌ಫರ್ಡ್ ಡೆಲ್ಲಿ ಬೌಲರ್‌ಗಳನ್ನು ಕಾಡಿದರು. ಈ ಜೋಡಿ ಭರ್ಜರಿ ಬ್ಯಾಟಿಂಗ್ ಮೂಲಕ ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಈ ಜೋಡಿ ಬರೋಬ್ಬರಿ ಶತಕದಾಟದ ಜೊತೆಯಾಟ ನೀಡಿದರು.
ರುದರ್‌ಫರ್ಡ್ 43(34) ರನ್ ಗಳಿಸಿ ಔಟಾದರೇ, ಜೋಸ್ ಬಟ್ಲರ್ ಔಟಾಗದೇ 54 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್ ಸಹಿತ 97 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಕೊನೆಯಲ್ಲಿ ಬಂದ ತೆವಾಟಿಯಾ ಕೇವಲ ಮೂರು ಎಸೆತಗಳಲ್ಲಿ 11 ರನ್ ಗಳಿಸಿ ಅಜೇಯರಾಗಿ ಉಳಿದರು.
ಡೆಲ್ಲಿ ಪರ ಮುಖೇಶ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ಜೋಸ್ ಬಟ್ಲರ್
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…