ಜೈಪುರ್: ಡೆತ್ ಓವರ್‌ನಲ್ಲಿ ಅದ್ಭುತ ಸ್ಪೆಲ್ ಮಾಡಿದ ಲಖನೌ ತಂಡದ ಆವೇಶ್ ಖಾನ್ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ 2 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು.
ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿ ಎದುರಾಳಿಗೆ 181 ರನ್ ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿ 2 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿತು.
ಲಖನೌ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌಗೆ ಆರಂಭಿಕ ಹಿನ್ನಡೆ ಎದುರಾಯಿತು. ಆರಂಭಿಕ ಆಟಗಾರ ಐಡೆನ್ ಮಾಕ್ರ್ರಂ 66(45) ರನ್, ಆಯೂಷ್ ಬದೋನಿ 50(34) ರನ್ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.
ಮಿಡೆಲ್ ಆರ್ಡರ್ ಕೈಕೊಟ್ಟ ಪರಿಣಾಮ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ತಂಡದ ಪರವಾಗಿ ಮಿಚೆಲ್ ಮಾರ್ಷ್ 4(6), ಪೂರನ್ 11(8), ನಾಯಕ ಪಂತ್ 3(9), ರನ್ ಗಳಿಸಿದರು.
ಕೊನೆಯಲ್ಲಿ ಅಬ್ಬರಿಸಿದ ಅಬ್ದುಲ್ ಸಮದ್ 30(19) ರನ್ ಗಳಿಸಿ ಔಟಾಗದೇ ಉಳಿದರೇ, ಡೆವಿಡ್ ಮಿಲ್ಲರ್ 7(8) ರನ್ ಗಳಿಸಿ ಅವರಿಗೆ ಸಾಥ್ ನೀಡಿದರು.
ರಾಜಸ್ಥಾನ್ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ಗೆ ಭರ್ಜರಿ ಆರಂಭ ದೊರೆಯಿತು. ಅತೀಕಿರಿಯ ಆಟಗಾರನಾಗಿ ಐಪಿಎಲ್ ಪಾದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 34(20) ರನ್ ಕಲೆಹಾಕಿ ಔಟಾದರೇ, ಭರವಸೆ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 52 ಎಸೆತ ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 74 ರನ್ ಚಚ್ಚಿದರು.
ಬಳಿಕ ಬಂದ ಹೇಟ್ನಾಯರ್ 12(7), ನಾಯಕ ರಿಯಾನ್ ಪರಾಗ್ 39(26) ರನ್ ಗಳಿಸಿ ಅಲ್ಪ ಹೋರಾಟ ನೀಡಿದರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಆ ಬಳಿಕ ಬಂದ ಬೇರೆ ಯಾರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧ್ರುವ್ ಜುರೇಲ್ ಔಟಾಗದೆ 6(5), ಶಿವಂ ದುಬೆ 3(3) ರನ್ ಗಳಿಸಿ ಸ್ಟ್ರೀಸ್‌ನಲ್ಲಿದ್ದೂ ತಂಡವನ್ನು ಗೆಲ್ಲಿಸಲಾಗಲಿಲ್ಲ.
ಲಖನೌ ಪರ ಆವೇಶ್ ಖಾನ್ ಪ್ರಮುಖ ನಾಲ್ಕು ವಿಕೆಟ್ ಪಡೆದು ಗಮನ ಸೆಳೆದರು. ಮಾಕ್ರ್ರಂ ಹಾಗೂ ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ಆವೇಶ್ ಖಾನ್
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…