ಲಖನೌ : ಮಿಚೆಲ್ ಮಾರ್ಷ್ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್ ಜೈಂಟ್ಸ್‌ನ ಬಿಗಿಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.
ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 203 ಉತ್ತಮ ರನ್ ಗಳಿಸಿತು.
ಈ ಗುರಿ ಬೆನ್ನೆತ್ತಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ ಸೋಲೊಪ್ಪಿಕೊಂಡಿತು.