ಆರ್‌ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿ ನಾಲ್ಕು ಗಂಟೆಗೂ ಹೆಚ್ಚು ಕಾದರೂ, ಆದರೆ, ಪಂದ್ಯದ ಟಾಸ್ ಕೂಡ ಆಗಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು.
ಇದರಿಂದಾಗಿ ಎರಡು ತಂಡಗಳಿಗೂ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಗಳಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು, ಪ್ಲೇ-ಆಫ್ ಸನಿಹದಲ್ಲಿದೆ. ಇತ್ತ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದರುವ ಕೊಲ್ಕತ್ತಾ ನೈಟ್ ರೈಡರ್ಸ್ ಇದುವರೆಗೂ 12 ಅಂಕ ಗಳಿಸಿದೆ. ಇದರ ಬಳಿ ಇನ್ನೊಂದ ಪಂದ್ಯ ಮಾತ್ರ ಉಳಿದಿದೆ.
ಭಾರತ-ಪಾಕಿಸ್ತಾನ ನಡುವಣ ಬಿಕ್ಕಟ್ಟಿನಿಂದ ಐಪಿಎಸ್ ಪಂದ್ಯಗಳು ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…