ಜೈಪುರ : ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಅರ್ಧಶತಕದಾಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ. ಆರ್‌ಸಿಬಿಯ ಈ ಗೆಲುವು ತಂಡದ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.
ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಆರ್, ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿ 17.3 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಗೆಲುವಿನ ನಗೆ ಬೀರಿತು.