ಕ್ರೀಡೆ

IPL 2025 | ಜೈಪುರದಲ್ಲಿ ಆರ್‌ಸಿಬಿಗೆ ಗೆಲುವಿನ ಜೈಕಾರ

ಜೈಪುರ : ವಿರಾಟ್‌ ಕೊಹ್ಲಿ ಮತ್ತು ಫಿಲ್‌ ಸಾಲ್ಟ್‌ ಅವರ ಅರ್ಧಶತಕದಾಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ. ಆರ್‌ಸಿಬಿಯ ಈ ಗೆಲುವು ತಂಡದ ಪಾಯಿಂಟ್‌ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

ಜೈಪುರದ ಸವಾಯಿ ಮಾನ್‌ ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ದುಕೊಂಡಿತು.

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಆರ್‌, ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿ 17.3 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

13 mins ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

58 mins ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

1 hour ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

1 hour ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

1 hour ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

1 hour ago