ಬೆಂಗಳೂರು: ಜೋಶ್ ಬಟ್ಲರ್ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್ ಜೈಂಟ್ಸ್ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು.
ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 17.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.
ಆರ್‌ಸಿಬಿ ಇನ್ನಿಂಗ್ಸ್: ತನ್ನ ತವರು ನೆಲದಲ್ಲಿ ಟೂರ್ನಿಯ ಮೊದಲ ಪಂದ್ಯವನ್ನಾಡಿದ ಆರ್‌ಸಿಬಿಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರ್ಸಿಬಿ ಆರಂಭಿಕರಾಗಿ ಕಣಕ್ಕಿಳಿದರು. ವಿರಾಟ್ ಕೊಹ್ಲಿ 7(6) ರನ್ ಗಳಿಸಿ ಅರ್ಶದ್ ಖಾನ್‌ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಇವರ ಹಿಂದೆಯೇ ಫಿಲ್ ಸಾಲ್ಟ್ 14(13) ರನ್ ಗಳಿಸಿ ಪೆವಿಲಿಯನ್ ಸೇರಿದರು.
ನಂತರ ಬಂದ ಪಡಿಕ್ಕಲ್ 4(3), ನಾಯಕ ಪಾಟೀದರ್ 12(12) ರನ್ ಬಾರಿಸಿ ಔಟಾದರು. ಬಳಿಕ ಒಂದಾದ ಲಿವಿಂಗ್‌ಸ್ಟೋನ್ ಹಾಗೂ ಜಿತೇಶ್ ಶರ್ಮಾ ತಂಡದ ಮೊತ್ತ ನೂರರ ಗಟಿ ದಾಟಲು ಸಹಕರಿಸಿದರು. ವಿಲಿಂಗ್‌ಸ್ಟೋನ್ 40 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್ ಸಹಿತ 54 ರನ್ ಚಚ್ಚಿದರೇ, ಜಿತೇಶ್ ಶರ್ಮಾ 33(21) ರನ್ ಕಲೆಹಾಕಿದರು. ಕೃನಾಲ್ ಪಾಂಡ್ಯ 5(5), ಕೊನೆಯಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ 32(18), ಭುವನೇಶ್ವರ್ ಕುಮಾರ್ ಔಟಾಗದೇ 1(2) ರನ್ ಗಳಿಸಿದರು.
ಗುಜರಾತ್ ಪರ ಮೊಹಮ್ಮದ್ ಸಿರಾಜ್ ಮೂರು ವಿಕೆಟ್, ಸಾಯ್ ಕಿಶೋರ್ ಎರಡು ವಿಕೆಟ್, ಅರ್ಶದ್ ಖಾನ್, ಪ್ರಸಿದ್ಧ್ ಕೃಷ್ಣ ಹಾಗೂ ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಜಿಟಿ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಟಿಗೆ ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತು. ನಾಯಕ ಶುಭ್‌ಮನ್ ಗಿಲ್ 14(14) ರನ್ ಗಳಿಸಿ ಭುವಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಸಾಯ್ ಸುದರ್ಶನ್ 49(36) ರನ್ ಗಳಿಸಿ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು.
ಮತ್ತೊಂದೆಡೆ ಅಬ್ಬರಿಸಿದ ಜೋಸ್ ಬಟ್ಲರ್ 39 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಿತ 73 ರನ್ ಗಳಿಸಿ ಔಟಾಗದೇ ಉಳಿದರು. ಇವರಿಗೆ ರುದರ್‌ಫರ್ಡ್ ಔಟಾಗದೇ 30(18) ರನ್ ಗಳಿಸಿ ಸಾಥ್ ನೀಡಿದರು.
ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಜಲ್‌ವುಡ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ಜೋಸ್ ಬಟ್ಲರ್
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…