ಕ್ರೀಡೆ

IPL 2025 | ತವರಿನಲ್ಲಿ ಮೊದಲ ಪಂದ್ಯ ಸೋತ ಆರ್‌ಸಿಬಿ

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು.

ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 17.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 170 ರನ್‌ ಕಲೆಹಾಕಿ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ತನ್ನ ತವರು ನೆಲದಲ್ಲಿ ಟೂರ್ನಿಯ ಮೊದಲ ಪಂದ್ಯವನ್ನಾಡಿದ ಆರ್‌ಸಿಬಿಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಫಿಲ್‌ ಸಾಲ್ಟ್‌ ಹಾಗೂ ವಿರಾಟ್‌ ಕೊಹ್ಲಿ ಆರ್ಸಿಬಿ ಆರಂಭಿಕರಾಗಿ ಕಣಕ್ಕಿಳಿದರು. ವಿರಾಟ್‌ ಕೊಹ್ಲಿ 7(6) ರನ್‌ ಗಳಿಸಿ ಅರ್ಶದ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಇವರ ಹಿಂದೆಯೇ ಫಿಲ್‌ ಸಾಲ್ಟ್‌ 14(13) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ನಂತರ ಬಂದ ಪಡಿಕ್ಕಲ್‌ 4(3), ನಾಯಕ ಪಾಟೀದರ್‌ 12(12) ರನ್‌ ಬಾರಿಸಿ ಔಟಾದರು. ಬಳಿಕ ಒಂದಾದ ಲಿವಿಂಗ್‌ಸ್ಟೋನ್‌ ಹಾಗೂ ಜಿತೇಶ್‌ ಶರ್ಮಾ ತಂಡದ ಮೊತ್ತ ನೂರರ ಗಟಿ ದಾಟಲು ಸಹಕರಿಸಿದರು. ವಿಲಿಂಗ್‌ಸ್ಟೋನ್‌ 40 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್‌ ಸಹಿತ 54 ರನ್‌ ಚಚ್ಚಿದರೇ, ಜಿತೇಶ್‌ ಶರ್ಮಾ 33(21) ರನ್‌ ಕಲೆಹಾಕಿದರು. ಕೃನಾಲ್‌ ಪಾಂಡ್ಯ 5(5), ಕೊನೆಯಲ್ಲಿ ಅಬ್ಬರಿಸಿದ ಟಿಮ್‌ ಡೇವಿಡ್‌ 32(18), ಭುವನೇಶ್ವರ್‌ ಕುಮಾರ್‌ ಔಟಾಗದೇ 1(2) ರನ್‌ ಗಳಿಸಿದರು.

ಗುಜರಾತ್‌ ಪರ ಮೊಹಮ್ಮದ್‌ ಸಿರಾಜ್‌ ಮೂರು ವಿಕೆಟ್‌, ಸಾಯ್‌ ಕಿಶೋರ್‌ ಎರಡು ವಿಕೆಟ್‌, ಅರ್ಶದ್‌ ಖಾನ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಜಿಟಿ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಟಿಗೆ ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತು. ನಾಯಕ ಶುಭ್‌ಮನ್‌ ಗಿಲ್‌ 14(14) ರನ್‌ ಗಳಿಸಿ ಭುವಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ಸಾಯ್‌ ಸುದರ್ಶನ್‌ 49(36) ರನ್‌ ಗಳಿಸಿ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು.

ಮತ್ತೊಂದೆಡೆ ಅಬ್ಬರಿಸಿದ ಜೋಸ್‌ ಬಟ್ಲರ್‌ 39 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್‌ ಸಹಿತ 73 ರನ್‌ ಗಳಿಸಿ ಔಟಾಗದೇ ಉಳಿದರು. ಇವರಿಗೆ ರುದರ್‌ಫರ್ಡ್‌ ಔಟಾಗದೇ 30(18) ರನ್‌ ಗಳಿಸಿ ಸಾಥ್‌ ನೀಡಿದರು.

ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಹಾಗೂ ಜೋಶ್‌ ಹೇಜಲ್‌ವುಡ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಜೋಸ್‌ ಬಟ್ಲರ್‌

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago