ಕ್ರೀಡೆ

IPL 2025 | ಕೆಕೆಆರ್‌ ವಿರುದ್ಧ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿದ ಆರ್‌ಸಿಬಿ

ಕೊಲ್ಕತ್ತಾ: ಫಿಲ್‌ ಸಾಲ್ಟ್‌, ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಆಕರ್ಷಕ ಅರ್ಧಶತಕದಾಟದ ಬಲದಿಂದ ಆತಿಥೇಯ ಕೊಲ್ಕತ್ತಾ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿದ ಆರ್‌ಸಿಬಿ ಐಪಿಎಲ್‌ ಸೀಸನ್‌ 18 ರಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಣ ಹಣಾಹಣಿಯಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿ ಆರ್‌ಸಿಬಿಗೆ 175 ರನ್‌ಗಳ ಟಾರ್ಗೆಟ್‌ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ 16.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 177 ರನ್‌ ಕಲೆಹಾಕಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಕೆಕೆಆರ್‌ ಇನ್ನಿಂಗ್ಸ್‌: ಡಿಕಾಕ್‌ ಮತ್ತು ಸುನೀಲ್‌ ನರೈನ್‌ ಕೆಕೆಆರ್‌ ಪರ ಇನ್ನಿಂಗ್ಸ್‌ ಆರಂಭಿಸಿದರು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಡಿಕಾಕ್‌ 4 ರನ್‌ ಗಳಿಸಿ ಹೇಜಲ್‌ವುಡ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಬಳಿಕ ಜೊತೆಯಾದ ನಾಯಕ ಅಜಿಂಕೆ ರಹಾನೆ ಮತ್ತು ಸುನೀಲ್‌ ನರೈನ್‌ ಆರ್‌ಸಿಬಿ ಬೌಲರ್‌ಗಳನ್ನು ಕಾಡಿದರು.

ರಹಾನೆ 31 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್‌ ಸಹಿತ 56 ರನ್‌ ಗಳಿಸಿದರು. ಸುನೀಲ್‌ ನರೈನ್‌ 26 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್‌ ಸಹಿತ 44 ರನ್‌ ಗಳಿಸಿ ಔಟಾಗಿ ಹೊರನಡೆದರು. ಉಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಬಂದ ಯಾರೂ ಉತ್ತಮ ಇನ್ನಿಂಗ್ಸ್‌ ಕಟ್ಟಿಕೊಡಲಿಲ್ಲ.

ವೆಂಕಟೇಶ್‌ ಅಯ್ಯರ್‌ 6, ಕಿಂಕು 12, ರಸೆಲ್‌ 4 ರನ್‌ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ರಘುವಂಶಿ 30 ರನ್‌ ಗಳಿಸಿ ತಂಡದ ಮೊತ್ತ 150ರ ಗಡಿ ದಾಟಲು ಸಹಕರಿಸಿದರು. ಹರ್ಷಿತ್‌ ರಾಣಾ 5, ರಮಣದೀಪ್‌ ಹಾಗೂ ಸ್ಪೆನ್ಸರ್‌ ಔಟಾಗದೇ ತಲಾ 6 ಮತ್ತು 1 ರನ್‌ ಗಳಿಸಿ ಉಳಿದರು.

ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ ಮೂರು ವಿಕೆಟ್‌, ಹೆಜಲ್‌ವುಡ್‌ ಎರಡು ವಿಕೆಟ್‌, ಸುಯೇಶ್‌ ಶರ್ಮಾ, ರಸಿಕ್‌ ದಾರ್‌ ಹಾಗೂ ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕರಾದ ಫಿಲ್‌ ಸಾಲ್ಟ್‌ ಹಾಗೂ ವಿರಾಟ್‌ ಕೊಹ್ಲಿ ಭದ್ರ ಬುನಾದಿ ಹಾಕಿಕೊಟ್ಟರು. ಈ ಜೋಡಿ ಪವರ್‌ ಪ್ಲೇನಲ್ಲಿ ಬರೋಬ್ಬರಿ 80 ರನ್‌ ಗಳಿಸಿದರು.

ಫಿಲ್‌ ಸಾಲ್ಟ್‌ 31 ಎಸೆತ, 9 ಬೌಂಡರಿ, 2 ಸಿಕ್ಸರ್‌ ಸಹಿತ 56 ರನ್‌ ಗಳಿಸಿ ಔಟಾದರು. ಬಳಿಕ ಬಂದ ದೇವದತ್‌ ಪಡಿಕ್ಕಲ್‌ 10, ನಾಯಕ ರಜತ್‌ ಪಟಿದಾರ್‌ 34 ರನ್‌ ಬಾರಿಸಿ ತಂಡದ ಗೆಲುವಿಗೆ ಸಹಕರಿಸಿದರು.

ಮತ್ತೊಂದೆಡೆ ಉಪಯುಕ್ತ ಆಟವಾಡಿದ ವಿರಾಟ್‌ ಕೊಹ್ಲಿ ಔಟಾಗದೇ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 59 ರನ್‌ ಗಳಿಸಿದರೇ, ಇತ್ತ ಲಿವಿಂಗ್‌ಸ್ಟೋನ್‌ ಔಟಾಗದೇ 5 ಎಸೆತಗಳಲ್ಲಿ 15 ರನ್‌ ಬಾರಿಸಿ ಗೆಲುವಿನ ದಡ ಸೇರಿಸಿದರು.

ಕೆಕೆಆರ್‌ ಪರ ಸುನೀಲ್‌ ನರೈನ್‌, ವೈಭವ್‌ ಅರೋರಾ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

4 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

7 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

16 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago