ಕ್ರೀಡೆ

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 163 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಜಯ ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಕೇವಲ 1 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ರನೌಟ್ ಆದರು. ಕೇವಲ 7 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ತಂಡ ಆಘಾತಕ್ಕೊಳಗಾಗಿತ್ತು. ಈ ವೇಳೆ, ಪಾತುಮ್ ನಿಸ್ಸಾಂಕ 30 ಎಸೆತಗಳಿಗೆ 4 ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿ ಒಟ್ಟು 44 ರನ್ ಕಲೆಹಾಕಿ, ತಂಡಕ್ಕೆ ಚೇತರಿಗೆ ನೀಡಿತು. ಸಮೀರ್ ರಿಜ್ವಿ 51 ಬಾಲ್‌ಗೆ 90 ರನ್ ಗಳಿಸಿ (7 ಫೋರ್ ಮತ್ತು 7 ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮೀರ್ ರಿಜ್ವಿ ಹಾಗೂ ನಿಸ್ಸಾಂಕ ಜೊತೆಯಾಟವಾಡಿ 66 ರನ್ ಗಳಿಸಿದರು. ಬಳಿಕ ಮಿಲ್ಲರ್ ಹಾಗೂ ರಿಜ್ವಿ 78 ರನ್‌ಗಳ ಜೊತೆಯಾಟವಾಡಿದರು.

ಇದಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ಫೀಲ್ಡಿಗಿಳಿದರು. ರಿಯಾನ್ ರಿಕಲ್ಟನ್ 9 ರನ್ ಗಳಿಸಿ ಔಟಾದರು. ಬಳಿಕ ಬಂದ ಯುವ ಬ್ಯಾಟರ್ ತಿಲಕ್ ವರ್ಮಾ ಯಾವುದೇ ರನ್ ಗಳಿಸದೇ ಪೆವಿಲಿಯನ್‌ಗೆ ಮರಳಿದರು. ಬಳಿಕ ತಂಡದ ನಾಯಕ ಸೂರ್ಯಕುಮಾರ್ ಯಾದವ್ 3 ಬೌಂಡರಿ ಹಾಗೂ 2 ಸಿಕ್ಸ್ ಬಾರಿಸಿ 36 ಎಸೆತಗಳಿಗೆ 51 ರನ್ ಗಳಿಸಿದರು. ರೋಹಿತ್ ಶರ್ಮಾ 26 ಬಾಲ್‌ಗಳಿಗೆ 5 ಫೋರ್, 1 ಸಿಕ್ಸ್ ಸಿಡಿಸಿ 35 ರನ್ ಗಳಿಸಿದರು. ಕೊನೆಯಲ್ಲಿ ನಮನ್ ಧರ್ 28 ರನ್ ಹಾಗೂ ಮಿಚೆಲ್ ಸ್ಯಾಂಟ್ನರ್ 18 ರನ್ ಗಳಿಸುವ ಮೂಲಕ ತಂಡದ ಮೊತ್ತ 160ರ ಗಡಿ ದಾಟಿಸಿದರು.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

10 hours ago