Mysore
24
broken clouds

Social Media

ಬುಧವಾರ, 06 ಮೇ 2026
Light
Dark

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ ರಾಯಲ್ಸ್‌ ವಿರುದ್ಧ 4 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ಈ ಋತುವಿನ ಮೊದಲ ವಿಜಯ ದಾಖಲಿಸಿದೆ.

ಎಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ರಾಜಸ್ಥಾನ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದು 155ರನ್ ಗಳಿಗೆ ಸೀಮಿತವಾಯಿತು. ವೈಭವ್ ಸೂರ್ಯವಂಶಿ 46 ರನ್ ಮತ್ತು ಯಶಸ್ವಿ ಜೈಸ್ವಾಲ್ 39 ರನ್ ಗಳಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಆಯ್ಕೆಯಾದರು.

ಗುರಿ ಬೆನ್ನಟ್ಟಿದ ಕೆಕೆಆರ್ ತಂಡವು 19.4 ಓವರ್‌ಗಳಲ್ಲಿ 6 ವಿಕೆಟ್ ಕಳೆದು 161 ರನ್ ಗಳಿಸಿ ಗೆಲುವು ಸಾಧಿಸಿತು. ರಿಂಕು ಸಿಂಗ್ 34 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿ ತಂಡವನ್ನು ಜಯದತ್ತ ಒಯ್ದರು. ಅನುಕೂಲ್ ರಾಯ್ 29 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್ ಸಿಡಿಸಿದ ಸಿಕ್ಸರ್‌ನೊಂದಿಗೆ ಕೆಕೆಆರ್ ಗೆಲುವು ಭದ್ರಗೊಂಡಿತು.

ಈ ಗೆಲುವಿನೊಂದಿಗೆ ಕೆಕೆಆರ್ ಅಂಕಪಟ್ಟಿಯಲ್ಲಿ ಸ್ಥಾನ ಸುಧಾರಿಸುವ ಅವಕಾಶ ಪಡೆದಿದೆ. ರಾಜಸ್ಥಾನ ರಾಯಲ್ಸ್ ಈ ಮುನ್ನ ನಾಲ್ಕು ಪಂದ್ಯಗಳಲ್ಲಿ ಗೆದ್ದು ಉತ್ತಮ ಆರಂಭ ಹೊಂದಿದ್ದರೂ, ಈ ಸೋಲಿನಿಂದ ಹಿನ್ನಡೆ ಅನುಭವಿಸಿದೆ.

 

Tags:
error: Content is protected !!