ಕ್ರೀಡೆ

IPL 2026 | ಬಾಂಗ್ಲ ಆಟಗಾರನನ್ನು ಕೈ ಬಿಟ್ಟ ʼಕೆಕೆಆರ್‌ʼ

ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಡಳಿತ ಮಂಡಳಿ ಕೈಬಿಟ್ಟಿದೆ.

ಕಳೆದ ತಿಂಗಳು ನಡೆದ ಆಟಗಾರರ ಹರಾಜಿನಲ್ಲಿ ಚೆನ್ನೈಸೂಪರ್ ಕಿಂಗ್ ಮತ್ತು ದೆಹಲಿ ಕ್ಯಾಪಿಟಲ್ ಜೊತೆಗಿನ ಜಿದ್ದಾಜಿದ್ದ ಬಿಡ್ಡಿಂಗ್ ನಂತರ ಕೆಕೆಆರ್ 30 ವರ್ಷದ ಎಡಗೈ ಬೌಲರ್‍ಅನ್ನು 2 ಕೋಟಿ ರೂ.ಮೂಲ ಬೆಲೆಯಿಂದ 9.20 ಕೋಟಿ ರೂ.ಗೆ ಪಡೆದುಕೊಂಡಿತ್ತು. ಹಲವಾರು ಟೀಕೆಗಳ ನಡುವೆ ಇಂದು ಎಚ್ಚೆತ್ತ ಬಿಸಿಸಿಐ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿತ್ತು. ಅಲ್ಲದೇ ಅಗತ್ಯವಿದ್ದರೆ ಕೆಕೆಆರ್‍ ಬದಲಿ ಆಟಗಾರನನ್ನು ಹೆಸರಿಸಲು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಘೋಷಣೆ ಮಾಡಿದೆ.

ಇತ್ತೀಚೆಗೆ ಬಾಂಗ್ಲದೇಶದಲ್ಲಿ ಸಂಭವಿಸಿದ ಕೆಲ ಘಟನೆಯಿಂದ ಉಭಯ ದೇಶಗಳ ಬಾಂದವ್ಯ ಕುಸಿದಿತ್ತು. ಬಳಿಕ ಕ್ರಿಕೆಟಿಗನ ಭಾಗವಹಿಸುವಿಕೆ ತಡೆಗೆ ಬಿಸಿಸಿಐ ಮೇಲೆ ಒತ್ತಡ ಹೆಚ್ಚುತ್ತಿತ್ತು. ಜನರ ಬಾವನೆಗೆ ಸ್ಪಂದಸಿದ ಬಿಸಿಸಿಐ ಬಾಂಗ್ಲಾ ಆಟಗಾರ ಆಯ್ಕೆಯನ್ನು ರದ್ದು ಮಾಡಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಕೆಕೆಆರ್ ತಿಳಿಸಿದೆ. ಈ ಮೂಲಕ ಪ್ರಸ್ತುತ ಎದ್ದಿದ್ದ ವಿವಾದಕ್ಕೆ ತೆರೆ ಎಳೆದಂತಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

30 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

52 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

2 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

6 hours ago