ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ರಿಯನ್ ರಿಕಲ್ಟನ್ ಅವರ ಸ್ಫೋಟಕ ಅರ್ಧಶತಕದ ಆಟದ ನೆರವಿನಿಂದ ಕೋಲ್ಕತ್ತಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.
ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಈ ರೋಚಕ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ಮಾಡಿ 220/4 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ತಂಡಕ್ಕೆ ನಾಯಕ ಅಜಿಂಕ್ಯಾ ರಹಾನೆ ಆಸರೆಯಾದರು.
ಈ ಗುರಿ ಬೆನ್ನಟ್ಟಿದ ಮುಂಬೈ ತಂಡ 19.1 ಓವರ್ ಗಳಲ್ಲಿ 224/4 ರನ್‌ಗಳನ್ನು ಗಳಿಸಿ 5 ಎಸೆತಗಳು ಬಾಕಿ ಇರುವಾಗಲೇ ಜಯ ದಾಖಲಿಸಿತು.
ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಅವರು ಪಂದ್ಯವನ್ನು ಗೆಲುವಿನತ್ತ ಮುನ್ನಡೆಸಿದರು.





