ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್ 19ರಂದು ದುಬೈನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.
ಇಂದು ( ನವೆಂಬರ್ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.
ಈ ನಿಯಮದ ಪ್ರಕಾರ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್ ಅಹ್ಮದ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮಯಾಂಕ್ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್ ಅಹ್ಮದ್ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್ ಅಹ್ಮದ್ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…