ಕ್ರೀಡೆ

IPL Auction 2024: ಶಹಬಾಜ್‌ ಅಹ್ಮದ್‌ ಕೈಬಿಟ್ಟು ಮಯಾಂಕ್‌ ಖರೀದಿಸಿದ ಆರ್‌ಸಿಬಿ

ಮುಂದಿನ ವರ್ಷ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಗಾಗಿ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿವೆ. ಡಿಸೆಂಬರ್‌ 19ರಂದು ದುಬೈನಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದ್ದು ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ತಂಡದಿಂದ ಕೈಬಿಡಲಿದ್ದೇವೆ ಎಂಬ ವರದಿ ನೀಡಬೇಕಿದೆ.

ಇಂದು ( ನವೆಂಬರ್‌ 26 ) ಯಾವ ಆಟಗಾರರನ್ನು ಕೈಬಿಡಲಿದ್ದೇವೆ ಎಂಬುದನ್ನು ತಿಳಿಸಲು ಕೊನೆಯ ದಿನವಾಗಿದ್ದು, ಕೆಲ ತಂಡಗಳು ಆಟಗಾರ ಎಕ್ಸ್‌ಚೇಂಜ್‌ ಸಹ ಮಾಡಿಕೊಂಡಿವೆ. ಹೌದು, ಫ್ರಾಂಚೈಸಿಯೊಂದು ಇನ್ನೊಂದು ಫ್ರಾಂಚೈಸಿಯ ಸಮ್ಮತಿಯೊಂದಿಗೆ ತಮ್ಮ ತಂಡದಲ್ಲಿರುವ ಆಟಗಾರರನ್ನು ನೀಡಿ ಆ ತಂಡದ ಆಟಗಾರನನ್ನು ಖರೀದಿಸಬಹುದಾಗಿದೆ.

ಈ ನಿಯಮದ ಪ್ರಕಾರ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ತಮ್ಮ ತಂಡದ ಶಹಬಾಜ್‌ ಅಹ್ಮದ್‌ ಅವರನ್ನು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ನೀಡಿ ಆ ತಂಡದಿಂದ ಮಯಾಂಕ್‌ ದಾಗರ್ ಅವರನ್ನು ಖರೀದಿಸಿದೆ. ಕಳೆದ ಬಾರಿಯ ಹರಾಜಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಮಯಾಂಕ್‌ ದಾಗರ್ ಅವರನ್ನು 1.8 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು ಹಾಗೂ ಶಹಬಾಜ್‌ ಅಹ್ಮದ್‌ ಅವರನ್ನು ಆರ್‌ಸಿಬಿ 2.4 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಇನ್ನು ಮಯಾಂಕ್‌ ಈ ಬಾರಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿರಲಿಲ್ಲ, ಶಹ್ಬಾಜ್‌ ಅಹ್ಮದ್‌ ಈ ಬಾರಿಯ ಐಪಿಎಲ್‌ನಲ್ಲಿ 10 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲಿಲ್ಲ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago