ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯು ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಎರಡು ದಶಕಗಳಿಂದ ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಕಾದಿರುವ ಬೆಂಗಳೂರು ಮತ್ತು ಪಂಜಾಬ್‌ಗೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಇಬ್ಬರೂ ಪ್ರಶಸ್ತಿ ಗೆದ್ದುಕೊಡುವ ಉತ್ಸಾಹದಲ್ಲಿ ಎದುರಾಗುತ್ತಿದ್ದಾರೆ.
ಇದನ್ನೂ ಓದಿ:- ರ‍್ಯಾಲಿ ಆಫ್ ಚಿಕ್ಕಮಗಳೂರು : ಎನ್.ಮಹಶ್ವೇರನ್‌ಗೆ ಗೆಲವು
18 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಕಾತುರದಲ್ಲಿ ಎರಡೂ ತಂಡಗಳು ಇವೆ. ಇಂದು ಸಂಜೆ 7.30ಕ್ಕೆ ಪಂದ್ಯ ಶುರುವಾಗಲಿದ್ದು, ಜಿಯೋ ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ. ಉಭಯ ತಂಡಗಳ ನಡುವೆ ಈವರೆಗೆ 36 ಪಂದ್ಯಗಳು ನಡೆದಿದ್ದು, ಈ ತಂಡಗಳು ತಲಾ 18 ಪಂದ್ಯಗಳಲ್ಲಿ ಗೆಲುವು ಕಂಡಿವೆ.





