Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವವಿದೆ.

ಒಂದು ಕಡೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಮತ್ತೊಂದು ಕಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‍ಸಿಎ) ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವೆ ಉಂಟಾಗಿರುವ ಸಂಘರ್ಷ ಇನ್ನು ಮುಗಿದಿಲ್ಲ. ಈ ಬೆಳವಣಿಗೆಗಳ ನಡುವೆಯೇ ಈ ಬಾರಿಯ ಉದ್ಘಾಟನಾ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸಿದ್ದತೆಗಳು ಆರಂಭವಾಗಿದೆ. ‌

2026ನೇ ಸರಣಿಯ ಐಪಿಎಲ್ ಉದ್ಘಾಟನಾ ಪಂದ್ಯ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.26ರಂದು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

ಉದ್ಘಾಟನಾ ಪಂದ್ಯಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಕ್ರಿಕೆಟ್ ಮೈದಾನದ ಕಾಮಗಾರಿಯ ವೇಗವನ್ನು ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ ಜಾಗದಲ್ಲಿ ಗೋಡೆ ಒಡೆದು, ಎಂಟ್ರಿ ಎಕ್ಸಿಟ್‍ಗೆ ವಿಶಾಲವಾದ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ.

ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿಯೇ ನಡೆಯುವ ಸಾಧ್ಯತೆಗಳಿದ್ದು, ಅದಕ್ಕಾಗಿ ಆರ್‌ಸಿಬಿ ಆಡಳಿತ ಮಂಡಳಿ, ಕೆಎಸ್‍ಸಿಎ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇತ್ತ ನಾಲ್ಕುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಆರ್‌ಸಿಬಿ ಆಡಳಿತ ಮಂಡಳಿ ಎಐ ಕ್ಯಾಮರಾ ಅಳವಡಿಕೆ ಮಾಡಿ, ಜನ ದಟ್ಟಣೆಯಾಗದಂತೆ ಆಡಳಿತ ಮಂಡಳಿಯಿಂದಲೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮುಂದಾಗಿದೆ.

Tags:
error: Content is protected !!