2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು : ನಾಯಕ ಮಹೇಂದ್ರ ಸಿಂಗ್ ಧೋನಿ, ಋತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೆ, ದೀಪಕ್ ಚಾಹರ್, ತುಷಾರ್ ದೇಶ್‌ಪಾಂಡೆ, ಮಹೀಶಾ ತೀಕ್ಷಣ, ಸಿಮ್ರನ್‌ಜಿತ್ ಸಿಂಗ್, ಮತೀಶ ಪತಿರಣ, ಪ್ರಶಾಂತ್ ಸೋಲಂಕಿ, ಮಿಚೆಲ್ ಸ್ಯಾಂಟ್ನರ್, ಹಂಗ್ರೇಕರ್, ರವೀಂದ್ರ ಜಡೇಜಾ, ಮೋಯಿನ್ ಅಲಿ, ಶಿವಂ ದುಬೆ, ಅಜಿಂಕ್ಯಾ ರಹಾನೆ, ನಿಶಾಂತ್ ಸಿಂಧು, ಶೇಕ್ ರಶೀದ್, ಅಜಯ್ ಮಂಡಲ್, ಮುಖೇಶ್ ಚೌಧರಿ
ಬಿಡುಗಡೆಗೊಂಡ ಆಟಗಾರರು : ಬೆನ್ ಸ್ಟೋಕ್ಸ್, ಡ್ವೇನ್ ಪ್ರಿಟೋರಿಯಸ್, ಭಗತ್ ವರ್ಮಾ, ಸೇನಾಪತಿ, ಆಕಾಶ್ ಸಿಂಗ್, ಕೈಲ್ ಜಾಮಿಂನ್ಸನ್, ಮಲಗ, ಅಂಬಾಟಿ ರಾಯುಡು.
2023 ರಲ್ಲಿನ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ತೋರಿದ್ದ ಬೆನ್ ಸ್ಟೋಕ್ಸ್ ಸಿಎಸ್‌ಕೆ ಪ್ರಾಂಚೈಸಿಯಿಂದ ಬಿಡುಗಡೆಗೊಂಡಿದ್ದಾರೆ. ಈ ಬಗ್ಗೆ ಸ್ಟೋಕ್ಸ್ ಮಾತನಾಡಿದ್ದು, ಮುಂದಿನ ವರ್ಷದ ಹೆವಿ ವರ್ಕ್ ಲೋಡ್ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ನಂತರ ಜೂನ್ ತಿಂಗಳಿನಲ್ಲಿ ಟಿ-20 ವರ್ಲ್ಡ್ ಕಪ್ ಇರುವುದರಿಂದ ಐಪಿಎಲ್ ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…