2024 ರ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು (ನವೆಂಬರ್ 26) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಗುಜರಾತ್ ಟೈಟನ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು : ಹಾರ್ದಿಕ್ ಪಾಂಡ್ಯ (ನಾಯಕ), ಡೆವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ದೀಮಾನ್ ಶಾಹ, ಕೇನ್ ವಿಲಿಯಮ್ಸ್‌ನ್, ಅಭಿನವ್ ಮನೋಹರ್, ಸಾಯ್ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮದ್ ಶಮಿ, ನೂರ್ ಅಹ್ಮದ್, ಸಾಯ್ ಕಿಶೋರ್, ರಶೀದ್ ಖಾನ್, ಜೊಶ್ ಲಿಟಲ್, ಮೊಹಿತ್ ಶರ್ಮಾ,
ಬಿಡುಗಡೆಗೊಂಡ ಆಟಗಾರರು : ಯಶ್ ದಯಾಳ್, ಕೆ.ಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಪ್ರದೀಪ್ ಸಂಗ್ವಾನ್, ಓಡೆನ್ ಸ್ಮಿತ್, ಅಲ್ಜಾರಿ ಜೋಸೆಫ್, ಧನುಶ್ ಶನಕ