ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್
ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ.
ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯುತ್ತಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ ಬಳಿಕ ಮತ್ತೆ ನಗರದಲ್ಲಿ ಕ್ರಿಕೆಟ್ ರಂಗೇರಲಿದೆ. ಈ ಬಾರಿ ಟೂರ್ನಿ 2 ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24ರವರೆಗೂ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ. ಟ್ರೋಫಿಗಾಗಿ ಈ ಬಾರಿಯೂ 10 ತಂಡಗಳು ಸೆಣಸಾಡಲಿದ್ದು, ಟೂರ್ನಿಯಲ್ಲಿ ಒಟ್ಟು 65 ದಿನಗಳ ಕಾಲ 74 ಪಂದ್ಯಗಳು ನಡೆಯಲಿವೆ.
ಬರೋಬ್ಬರಿ 18 ವರ್ಷಗಳ ಕಾಯುವಿಕೆ ಬಳಿಕ ಕಳೆದ ಬಾರಿ ಕಪ್ ಗೆದ್ದಿದ ಆರ್‌ಸಿಬಿ ತಂಡ ಈ ಬಾರಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಟೂರ್ನಿಗೆ ಕಾಲಿಡಲಿದ್ದು, ಮತ್ತೊಮ್ಮೆ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ. ಈ ಬಾರಿಯೂ ಬಹುತೇಕ ದಿನ ಒಂದೇ ಪಂದ್ಯ ನಡೆಯಲಿದೆ. ಕೆಲ ವಾರಾಂತ್ಯಗಳಲ್ಲಿ 2 ಪಂದ್ಯಗಳು ನಿಗದಿಯಾಗಿವೆ. ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ, 2ನೇ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಟೂರ್ನಿಯಲ್ಲಿ ತಲಾ 5 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ತಂಡಗಳ ಈವರೆಗಿನ ಸಾಧನೆ ಆಧಾರದಲ್ಲಿ 2 ಗುಂಪುಗಳನ್ನು ರಚಿಸಲಾಗಿದೆ. ಆದರೆ ಈ ಗುಂಪುಗಳು ವರ್ಚುವಲ್ ಆಗಿದ್ದು, ಅಂಕಪಟ್ಟಿಯಲ್ಲಿ ಗಣನೆಗೆ ಬರುವುದಿಲ್ಲ, ಚೆನ್ನೈ, ಕೋಲ್ಕತಾ, ರಾಜಸ್ಥಾನ, ಆರ್‌ಸಿಬಿ, ಪಂಜಾಬ್ ಒಂದು ಗುಂಪಿನಲ್ಲಿದ್ದು, ಮುಂಬೈ, ಸನ್ ರೈಸರ್ಸ್, ಗುಜರಾತ್, ಡೆಲ್ಲಿ ಹಾಗೂ ಲಖನೌ ತಂಡಗಳು ಮತ್ತೊಂದು ಗುಂಪಿನಲ್ಲಿವೆ.
ಪ್ರತಿ ತಂಡ ತನ್ನ ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನ 5 ತಂಡಗಳ ವಿರುದ್ಧ ತಲಾ 2 ಪಂದ್ಯ ಆಡಲಿದೆ. ಉದಾಹರಣೆಗೆ, ಆರ್‌ಸಿಬಿ ತನ್ನ ಗುಂಪಿನಲ್ಲಿರುವ ಚೆನ್ನೈ, ಕೋಲ್ಕತಾ, ರಾಜಸ್ಥಾನ, ಪಂಜಾಬ್ ವಿರುದ್ಧ ತಲಾ 1 ಹಾಗೂ ಇನ್ನೊಂದು ಗುಂಪಿನಲ್ಲಿರುವ ಗುಜರಾತ್, ಮುಂಬೈ, ಲಖನೌ, ಸನ್ ರೈಸರ್ಸ್, ಡೆಲ್ಲಿ ವಿರುದ್ಧ ತಲಾ 2 ಪಂದ್ಯ ಆಡಬೇಕಿದೆ. ಅಂದರೆ, ಪ್ರತಿ ತಂಡಕ್ಕೆ ಲೀಗ್ ಹಂತದಲ್ಲಿ ತಲಾ 14 ಪಂದ್ಯ. ಲೀಗ್ ಹಂತ ಮುಕ್ತಾಯಕ್ಕೆ ಅಗ್ರ-2 ಸ್ಥಾನ ಪಡೆಯುವ ತಂಡಗಳು ಕಾಲಿಫೈಯರ್-1 ಹಾಗೂ 3, 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪ್ರವೇಶಿಸಲಿವೆ. ಕ್ಯಾಲಿಫೈಯರ್-1ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೇರಲಿದೆ. ಸೋತ ತಂಡ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದ ವಿರುದ್ಧ ಆಡಲಿದ್ದು, ಅದರಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದೆ.
ಇನ್ನೂ ತನ್ನ ನೆಚ್ಚಿನ ತಂಡಕ್ಕೆ ಶುಭಕೋರಿರುವ ವಂಚನೆ ಕೇಸ್‌ನಲ್ಲಿ ದೇಶಭ್ರಷ್ಟನಾಗಿರುವ ವಿಜಯ್ ಮಲ್ಯ, ಆರ್‌ಸಿಬಿ ಸಿಂಹಗಳು ಮತ್ತೆ ಘರ್ಚಿಸಲಿದೆ. ಆರ್‌ಸಿಬಿ ಆಟಗಾರರು ನಮ್ಮ ಸಿಂಹಗಳು. ಚಾಂಪಿಯನ್ಸ್‌ಗಳಿಗೆ ಶುಭವಾಗಲಿ ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…