Mysore
22
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

IPL 2025: ಕೆಕೆಆರ್ ತಂಡದ ನಾಯಕನಾಗಿ ಅಜಿಂಕ್ಯ ನೇಮಕ

ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡದ ನಾಯಕನಾಗಿ ಭಾರತದ ಬ್ಯಾಟರ್‌ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.

ದೀರ್ಘಕಾಲದಿಂದ ಕೆಕೆಆರ್‌ ತಂಡದಲ್ಲಿ ಆಡುತ್ತಿರುವ ವೆಂಕಟೇಶ್‌ ಅಯ್ಯರ್‌ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಇಂದು ಕೊಲ್ಕತ್ತಾ ನೈಟ್‌ ರೈಡರ್ಸ್‌ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.

ಐಲಿಎಲ್‌ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್‌ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.

ಮಾ.22ರಂದು ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡ, ಆರ್‌ಸಿಬಿ ತಂಡವನ್ನು ಎದುರಿಸಲಿದೆ.

Tags: