ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ.
ದೀರ್ಘಕಾಲದಿಂದ ಕೆಕೆಆರ್ ತಂಡದಲ್ಲಿ ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ರಕಟಣೆ ಬಿಡುಗಡೆ ಮಾಡಿದೆ.
ಐಲಿಎಲ್‌ನಲ್ಲಿ ಅತ್ಯಂತ ಯಶಸ್ವಿ ತಂಡದಲ್ಲಿ ಒಂದಾಗಿರುವ ಕೆಕೆಆರ್ ತಂಡವನ್ನು ಮುನ್ನಡೆಸುವ ಹೊಣೆ ನನಗೆ ನೀಡಿರುವುದು ಗೌರವದ ಸಂಗತಿ. ನಮ್ಮ ತಂಡವು ಎಲ್ಲಾ ವಿಭಾಗದಲ್ಲೂ ಉತ್ತಮವಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳೀಕೆಯಲ್ಲಿ ತಿಳಿಸಿದ್ದಾರೆ.
ಮಾ.22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡ, ಆರ್‌ಸಿಬಿ ತಂಡವನ್ನು ಎದುರಿಸಲಿದೆ.
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…