ಚೆನ್ನೈ: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 25 ರನ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್ ಸೋಲನುಭವಿಸಿದೆ.
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿ 25 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಕನ್ನಡಿಗ ಕೆ.ಎಲ್ ರಾಹುಲ್ 77(51) ಹಾಗೂ ಅಭಿಷೇಕ್ ಪೋರೆಲ್ 33(20) ತಂಡಕ್ಕೆ ಭದ್ರ ಬುನಾದಿ ಹಾಕಿದರು. ಇವರ ನಂತರ ನಾಯಕ ಅಕ್ಷರ್ ಪಟೇಲ್ 21(14), ಸಮೀರ್ ರಿಜ್ವಿ 20(15), ಅಶುತೋಶ್ ಶರ್ಮಾ 1(1), ಸ್ಟಬ್ಸ್ 24(12) ರನ್ ಗಳಿಸಿ ಸ್ಕ್ರೀಸ್‌ನಲ್ಲಿ ಉಳಿದರು.
ಸಿಎಸ್‌ಕೆ ಪರ ಖಲೀಲ್ ಅಹ್ಮದ್ 2 ವಿಕೆಟ್, ರವೀಂದ್ರ ಜಡೇಜಾ, ನೂರ್ ಅಹ್ಮದ್ ಹಾಗೂ ಪತಿರಣ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈ ಮತ್ತೊಮ್ಮೆ ಮುಗ್ಗರಿಸಿತು. ರಚಿನ್ ರವೀಂದ್ರ 3(6), ಡೆವೋನ್ ಕಾನ್ವೆ 13(14) ರನ್ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಗಾಯಕ್ವಾಡ್ 5(4), ಶಿವಂ ದುಬೆ 18(15), ಜಡೇಜಾ 2(3) ರನ್ ಗಳಿಸಿ ಔಟಾದರು.
ಕೊನೆಯಲ್ಲಿ ಹೋರಾಡಿದ ವಿಜಯ್ ಶಂಕರ್ ಹಾಗೂ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಧೋನಿ ಔಟಾಗದೇ 30(26) ರನ್ ಗಳಿಸಿದರೇ, ವಿಜಯ್ ಶಂಕರ್ ಔಟಾಗದೇ 54 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 69 ರನ್ ಗಳಿಸಿದರು.
ಡೆಲ್ಲಿ ಪರ ವಿಪ್ರಾಜ್ ನಿಗಮ್ 2 ವಿಕೆಟ್, ಸ್ಟಾರ್ಕ್, ಮುಖೇಶ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…