ಕ್ರೀಡೆ

IPL2025: ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಕ್ಯಾಪಿಟಲ್ಸ್‌

ಚೆನ್ನೈ: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 25 ರನ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್‌ ಸೋಲನುಭವಿಸಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 183 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 158 ರನ್‌ ಗಳಿಸಿ 25 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಕನ್ನಡಿಗ ಕೆ.ಎಲ್‌ ರಾಹುಲ್‌ 77(51) ಹಾಗೂ ಅಭಿಷೇಕ್‌ ಪೋರೆಲ್‌ 33(20) ತಂಡಕ್ಕೆ ಭದ್ರ ಬುನಾದಿ ಹಾಕಿದರು. ಇವರ ನಂತರ ನಾಯಕ ಅಕ್ಷರ್‌ ಪಟೇಲ್‌ 21(14), ಸಮೀರ್‌ ರಿಜ್ವಿ 20(15), ಅಶುತೋಶ್‌ ಶರ್ಮಾ 1(1), ಸ್ಟಬ್ಸ್‌ 24(12)  ರನ್‌ ಗಳಿಸಿ ಸ್ಕ್ರೀಸ್‌ನಲ್ಲಿ ಉಳಿದರು.

ಸಿಎಸ್‌ಕೆ ಪರ ಖಲೀಲ್‌ ಅಹ್ಮದ್‌ 2 ವಿಕೆಟ್‌, ರವೀಂದ್ರ ಜಡೇಜಾ, ನೂರ್‌ ಅಹ್ಮದ್‌ ಹಾಗೂ ಪತಿರಣ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈ ಮತ್ತೊಮ್ಮೆ ಮುಗ್ಗರಿಸಿತು. ರಚಿನ್‌ ರವೀಂದ್ರ 3(6), ಡೆವೋನ್‌ ಕಾನ್ವೆ 13(14) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಗಾಯಕ್ವಾಡ್‌ 5(4), ಶಿವಂ ದುಬೆ 18(15), ಜಡೇಜಾ 2(3) ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಹೋರಾಡಿದ ವಿಜಯ್‌ ಶಂಕರ್‌ ಹಾಗೂ ಮಹೇಂದ್ರ ಸಿಂಗ್‌ ಧೋನಿ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಧೋನಿ ಔಟಾಗದೇ 30(26) ರನ್‌ ಗಳಿಸಿದರೇ, ವಿಜಯ್‌ ಶಂಕರ್‌ ಔಟಾಗದೇ 54 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್‌ ಸಹಿತ 69 ರನ್‌ ಗಳಿಸಿದರು.

ಡೆಲ್ಲಿ ಪರ ವಿಪ್ರಾಜ್‌ ನಿಗಮ್‌ 2 ವಿಕೆಟ್‌, ಸ್ಟಾರ್ಕ್‌, ಮುಖೇಶ್‌ ಕುಮಾರ್‌ ಮತ್ತು ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago