ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆರ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.
ಮಾರ್ಚ್ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್ ಹಣಾಹಣಿಯು ಮೇ25ರಂದು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಹೋದ ಆವೃತ್ತಿಯಲ್ಲಿ ಕೆಕೆಆರ್ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ನಾಯಕ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಈ ಬಾರಿ ಕೆಕೆಆರ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಕುತೂಹಲ ಮೂಡಿದೆ.
ಆರ್‌ಸಿಬಿ, ನೆನ್ನೆಯಷ್ಟೇ ತಂಡದ ನಾಯಕನಾಗಿ ರಜತ್ ಪಾಟೀದಾರ್ ಅವರನ್ನು ನೇಮಿಸಿದ್ದು, ತಂಡವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದರ ಬಗ್ಗೆ ಬೆಂಗಳೂರು ತಂಡದ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.
ತಂಡಗಳು ಹಿಂತಿವೆ
ಆರ್‌ಸಿಬಿ: ರಜತ್ ಪಾಟೀದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ಧರ್, ಸುಯಾಷ್ ಶರ್ಮಾ, ಭವನೇಶ್ವರ್ ಕುಮಾರ್, ಕೃಣಾಲ್ ಪಾಂಡ್ಯ, ಟಿಮ್ ಡೆವಿಡ್, ಜೇಕಬ್ ಬೆಥಲ್, ದೇವದತ್ತ ಪಡಿಕಲ್, ನುವಾನ್ ತುಷಾರ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಿಸ್ತಿಕ್ ಛಿಕಾರ, ಮೋಹಿತ್ ರಾಥೆ, ಅಭಿನಂದನ್ ಸಿಂಗ್.
ಕೆಕೆಆರ್: ವೆಂಕಟೇಶ್ ಐಯ್ಯರ್, ಮೋಯಿನ್ ಅಲಿ, ಸುನೀಲ್ ನರೇನ್, ಆಂಡ್ರೆ ರಸೆಲ್, ಕ್ವಿಂಟಾನ್ ಡಿ ಕಾಕ್, ರಹಮನುಲ್ಲಾ ಗುರ್ಬಾಜ್, ಮನೀಷ್ ಪಾಂಡೆ, ಮಯಾಂಕ್ ಮಾರ್ಕಂಡೆ, ವೈಭವ್ ಆರೋರಾ, ಎನ್ರಿಚ್ ನೋಕಿಯೆ, ಉಮ್ರಾನ್ ಮಲಿಕ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಲುವನೀತ್ ಸಿಸೋಡಿಯಾ, ವರುಣ್ ಚಕ್ರವರ್ತಿ, ಹರರ್ಷಿತ್ ರಾಣಾ, ಸ್ಪೆನ್ಸರ್ ಜಾನ್ಸನ್, ಅಂಗ್‌ಕ್ರಿಷ್ ರಘವಂಶಿ, ರೋವ್ಮನ್ ಪೊವೆಲ್, ಅನುಕೂಲ್ ರಾಯ್, ರಮಣ್‌ದೀಪ್ ಸಿಂಗ್.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…