ಹೈದರಾಬಾದ್: ಮೊಹಮ್ಮದ್ ಸಿರಾಜ್ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್ ಗಿಲ್ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್ ತಂಡವು ಹೈದರಾಬಾದ್ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಅತಿಥೇಯ ಹೈದರಾಬಾದ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.
ಅದರಂತೆ ಬ್ಯಾಂಟಿಂಗ್ ಆರಂಭಿಸಿದ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ಬೌಲರ್‌ಗಳ ದಾಳಿಗೆ ನಲುಗಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಿತೀಶ್ ರೆಡ್ಡಿ 31(34) ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್ ಎನಿಸಿದರು.
ಉಳಿದಂತೆ ಅಭೀಷೇಕ್ ಶರ್ಮಾ 18(16), ಇಶಾನ್ ಕಿಶಾನ್ 17(14), ಕ್ಲಾಸೆನ್ 27(19), ಅಂಕಿತ್ ವರ್ಮಾ 18(14) ಹಾಗೂ ಕೊನೆಯಲ್ಲಿ ನಾಯಕ ಪ್ಯಾಟ್ ಕಮಿನ್ಸ್ 22(9) ರನ್‌ಗಳಿಸಿದರು.
ಗುಜರಾತ್ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದರು. ಪ್ರಸಿದ್ ಕೃಷ್ಣ ಹಾಗೂ ಸಾಯಿ ಕಿಶೋರ್ ತಲಾ ಎರಡು ವಿಕಟ್ ಪಡೆದರು.
ಸುಲಭ ಗುರಿ ಬೆನ್ನತ್ತಿದ ಗುಜರಾತ್ ತಂಡ 16.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್‌ಗಳಿಸಿ ಗೆಲುವಿನ ನಗೆ ಬೀರಿತು.
ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ 5(9) ಹಾಗೂ ಬಟ್ಲರ್ ವಿಕೆಟ್ ಬಳಿಕ ಒಂದಾದ ನಾಯಕ ಶುಭಮನ್ ಗಿಲ್ 61(43)* ಹಾಗೂ ವಾಷಿಂಗ್ಟನ್ ಸುಂದರ್ 49(29) ರನ್‌ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. ಕೊನೆಯಲ್ಲಿ ರುದರ್‌ಫೋರ್ಡ್ 35(16)* ರನ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟರು.
ಹೈದರಾಬಾದ್ ಪರ ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ ಒಂದು ವಿಕೆಟ್ ಪಡೆದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…