ಚೆನ್ನೈ: ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ 31 ರನ್ ಬಾರಿಸುವ ಮೂಲಕ ಧವನ್ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.
ಅಂದಹಾಗೆ, ಚೆನ್ನೈ ವಿರುದ್ಧದ 34 ಪಂದ್ಯಗಳಲ್ಲಿ 33 ಇನ್ನಿಂಗ್ಸ್ ಆಡಿರುವ ವಿರಾಟ್ 1084 ರನ್ ಗಳಿಸಿದ್ದಾರೆ. ಇದರಲ್ಲಿ 9 ಅರ್ಧಶತಕ ದಾಖಲಾಗಿವೆ.
ಶುಕ್ರವಾರದ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಎದುರು ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. 29 ಪಂದ್ಯಗಳನ್ನಾಡಿರುವ ಶಿಖರ್ ಧವನ್ 1054 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 8 ಅರ್ಧಶತಕಗಳು ದಾಖಲಾಗಿವೆ.