Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

IPL2025: KKR v/s RCB ನಡುವಿನ ಪಂದ್ಯ ರದ್ದಾಗುವ ಸಾಧ್ಯತೆ??

ಕೊಲ್ಕತ್ತಾ: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025ರ ಕ್ರಿಕೆಟ್‌ ಟೂರ್ನಿಯ ಆರಂಭಿಕ ಪಂದ್ಯ ನಡೆಯುವುದು ಅನುಮಾನವಾಗಿದೆ.

ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯುವ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕವಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ ಬಂಗಾಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್‌20 ರಿಂದ 22 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ನೆನ್ನೆ ಸಂಜೆ 5ರ ವೇಳೆ ಉಭಯ ತಂಡಗಳು ಅಭ್ಯಾಸದಲ್ಲಿ ತೊಡಗಿದ್ದ ಸಂದರ್ಭ ತುಂತುರು ಮಳೆ ಶುರುವಾಗಿದೆ. ಆದ್ದರಿಂದ, ಇಂದಿನ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಳೆ ಅಡ್ಡಿಪಡಿಸುವ ಆತಂಕಗಳಿವೆ.

ಐಪಿಎಲ್‌ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್‌, ಕರಣ್‌ ಔಜ್ಲಾ ಮತ್ತು ಬಾಲಿವುಡ್‌ ಸ್ಟಾರ್‌ ನಟಿ ದಿಶಾ ಪಟಾನಿ ಸಂಗೀತ ಪ್ರದರ್ಶನ ನೀಡಲಿದ್ದಾರೆ.

ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ.

 

Tags:
error: Content is protected !!