ಕೊಲ್ಕತ್ತಾ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಕ್ರಿಕೆಟ್ ಟೂರ್ನಿಯ ಆರಂಭಿಕ ಪಂದ್ಯ ನಡೆಯುವುದು ಅನುಮಾನವಾಗಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕವಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ ಬಂಗಾಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್20 ರಿಂದ 22 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ನೆನ್ನೆ ಸಂಜೆ 5ರ ವೇಳೆ ಉಭಯ ತಂಡಗಳು ಅಭ್ಯಾಸದಲ್ಲಿ ತೊಡಗಿದ್ದ ಸಂದರ್ಭ ತುಂತುರು ಮಳೆ ಶುರುವಾಗಿದೆ. ಆದ್ದರಿಂದ, ಇಂದಿನ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಳೆ ಅಡ್ಡಿಪಡಿಸುವ ಆತಂಕಗಳಿವೆ.
ಐಪಿಎಲ್ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ಬಾಲಿವುಡ್ ಸ್ಟಾರ್ ನಟಿ ದಿಶಾ ಪಟಾನಿ ಸಂಗೀತ ಪ್ರದರ್ಶನ ನೀಡಲಿದ್ದಾರೆ.
ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…