ಕೊಲ್ಕಾತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 18ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ತಂಡದ ಸವಾಲು ಎದುರಿಸಲು ಆರ್‌ಸಿಬಿ ತಂಡ ಸಿದ್ದತೆ ನಡೆಸಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಅಭ್ಯಾಸ ನಡೆಸಿದರು.
ಬ್ಯಾಟರ್ ವಿರಾಟ್ ಕೊಹ್ಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಆಲ್‌ರೌಡರ್ ಕೃಣಾಲ್ ಪಾಂಡ್ಯ ಸೇರಿದಂತೆ ಎಲ್ಲ ಆಟಗಾರರು ಹಾಜರಿದ್ದರು. ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮಾರ್ಗದರ್ಶನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ತಾಲೀಮು ನಡೆಸಿದರು.
ಶನಿವಾರ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.





