ಹೈದರಾಬಾದ್: ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯಲ್ಲಿ ಭಾನುವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಕ್ ಕ್ಲಾಸೆನ್ ನಂತಹ ಸ್ಪೋಟಕ ಬ್ಯಾಟರ್‌ಗಳನ್ನು ಹೊಂದಿರುವ ಅತಿಥೇಯ ತಂಡವು ಬೃಹತ್ ಮೊತ್ತ ಗಳಿಸುವ ನಿರೀಕ್ಷೆಯಲ್ಲಿದೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಅನುಭವಿಗಳಾದ ನಾಯಕ ಪ್ಯಾಟ್ ಕಮಿನ್ಸ್, ಮೊಹಮ್ಮದ್ ಶಮಿ, ಆಡಂ ಜಂಪಾ ಅವರಿದ್ದು ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.
ಇತ್ತ ರಾಜಸ್ಥಾನ ತಂಡದಿಂದ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಅವರನ್ನು ಕೈಬಿಟ್ಟಿರುವುದರಿಂದ ಜೊತೆಗೆ ಸಂಜು ಸ್ಯಾಮ್ಸನ್ ಬೆರಳಿನ ಗಾಯದಿಂದ ಈಗ ಚೇತರಿಸಿಕೊಂಡಿರುವ ಕಾರಣ ಬ್ಯಾಟಿಂಗ್ ಬಲ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ನಿತೀಶ್ ರಾಣಾ ಮತ್ತು ಯಶಸ್ವಿ ಜೈಸ್ವಾಲ್ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಪಂದ್ಯ ಆರಂಭ: ಮಧ್ಯಾಹ್ನ 3.30
ಸ್ಥಳ: ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…