ಹೈದರಾಬಾದ್: ಮಿಚೆಲ್ ಮಾರ್ಷ್ ಹಾಗೂ ನಿಕೋಲಸ್ ಪೂರನ್ ಅವರ ಅಬ್ಬರದ ಆಟದಿಂದ ಹೈದರಾಬಾದ್ ವಿರುದ್ಧ ಲಖನೌ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಅದರಂತೆ ಬ್ಯಾಟಿಂಗ್ ಆರಂಭಿಸಿದ ಬಿಗ್ ಹಿಟ್ಟರ್‌ಗಳ ಹೈದರಾಬಾದ್ ತಂಡವು ಲಖನೌ ಬೌಲರ್‌ಗಳ ಬಿಗಿ ಬೌಲಿಂಗ್ ದಾಳಿಯ ನಡುವೆಯೂ 9 ವಿಕೆಟ್ ಕಳೆದುಕೊಂಡು 190 ರನ್‌ಗಳಿಸಿತು. ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ 47(28), ನಿತೀಸ್ ಕುಮಾರ್ ರೆಡ್ಡಿ 32(28), ಹೆನ್ರಿಕ್ ಕ್ಲಾಸೆನ್ 26(17), ಅಂಕಿತ್ ವರ್ಮಾ 36(13), ಪ್ಯಾಟ್ ಕಮಿನ್ಸ್ 18(4) ರನ್ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು.
ಲಖನೌ ತಂಡದ ಪರ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 34ರನ್ ನೀಡಿ 4 ವಿಕೆಟ್ ಪಡೆದರೆ ಅವೀಶ್ ಖಾನ್, ಡಿಎಸ್ ರತಿ, ರವಿ ಬಿಷ್ಣೊಯಿ, ಫ್ರಿನ್ಸ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ತಂಡದ ಆರಂಭಿಕ ಬ್ಯಾಟರ್ ಏಡನ್ ಮರ್ಕರಮ್ 1(4) ವಿಕೆಟ್ ನಂತರ ಮಿಚೆಲ್ ಮಾರ್ಸ್ 52(31) ಜೊತೆಗೋಡಿದ ನಿಕೋಲಸ್ ಪೂರನ್ 70(26) ಬಿರುಸಿನ ಆರಂಭ ಒದಗಿಸುವ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹತ್ತಿರ ಕೊಂಡೊಯ್ದರು.
ಇವರಿಬ್ಬರ ವಿಕೆಟ್ ನಂತರ ಕೊನೆಯಲ್ಲಿ ಡೆವಿಡ್ ಮಿಲ್ಲರ್ 13(7) ಹಾಗೂ ಅಬ್ದುಲ್ ಸಮದ್ 22(8) ಆಟದ ಜೊತೆಯೊಂದಿಗೆ ಲಖನೌ ತಂಡ 16.1 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…