ಕ್ರೀಡೆ

ಅಹಮದಾಬಾದ್ ಪಿಚ್ ನಲ್ಲಿ ದೆವ್ವವಿದೆಯೇ?: ಪಾಕ್ ಮಂಡಳಿಗೆ ಅಫ್ರಿದಿ ಪ್ರಶ್ನೆ

ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ಮಂಡಳಿಯನ್ನು ಪ್ರಶ್ನಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಆಡಲು ನಿರಾಕರಿಸಿದ ಹಿಂದಿನ ತರ್ಕದ ಬಗ್ಗೆ ಪಿಸಿಬಿಯನ್ನು ಅಫ್ರಿದಿ ಪ್ರಶ್ನಿಸಿದರು.

“ಅಹಮದಾಬಾದ್ ಪಿಚ್‌ಗಳಲ್ಲಿ ಆಡಲು ಅವರು ಏಕೆ ನಿರಾಕರಿಸುತ್ತಿದ್ದಾರೆ? ಅದೇನು ಬೆಂಕಿಯನ್ನು ಎಸೆಯುತ್ತದೆಯೇ ಅಥವಾ ಅಲ್ಲೇನು ದೆವ್ವವಿದೆಯೇ? ಹೋಗಿ ಆಟವಾಡಿ, ಗೆಲುವು ಸಾಧಿಸಿ” ಎಂದು ಅಫ್ರಿದಿ ಸಾಮಾ ಟಿವಿಯಲ್ಲಿ ಹೇಳಿದರು.

“ನಮಗೆ ಮುಖ್ಯವಾದುದು ಪಾಕಿಸ್ತಾನ ತಂಡದ ಗೆಲುವು. ಮುಖ್ಯ ವಿಷಯ ಅದೆ. ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳಿ. ತುಂಬಿರುವ ಭಾರತೀಯ ಪ್ರೇಕ್ಷಕರ ಮುಂದೆ ವಿಜಯ ಸಾಧಿಸಿ” ಎಂದು ಅವರು ಹೇಳಿದರು.

ಅಕ್ಟೋಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.

andolanait

Recent Posts

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

7 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

42 mins ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

57 mins ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

1 hour ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

1 hour ago

ಮಂದಿರ-ಮಸೀದಿಗಳ ಹೊಸ ವಿವಾದ: ಮೋಹನ್ ಭಾಗವತ್‌ ಕಳವಳ

ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ…

1 hour ago