ಕ್ರೀಡೆ

‘ಬೇಗ ಔಟ್‌ ಆಗಬೇಕೆಂದು ಹಿಡಿಶಾಪ ಹಾಕ್ತಾರೆ’- ಧೋನಿ ಫ್ಯಾನ್ಸ್‌ ಬಗ್ಗೆ ಜಡೇಜಾ ಅಚ್ಚರಿ ಹೇಳಿಕೆ!

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್‌ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್‌ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್‌ ಧೋನಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನನ್ನು ಕಣ್ತುಂಬಿಸಿಕೊಳ್ಳಲು ಸ್ಟೇಡಿಯಂಗೆ ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಅದರಲ್ಲೂ ವಿಶೇಷವಾಗಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ತವರು ಅಂಗಣ ಎಂಎ ಚಿದಂಬರಂ ಕ್ರೀಡಾಂಗಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿದ್ದಾರೆ. ಪಂದ್ಯದ ವೇಳೆ ಧೋನಿ….ಧೋನಿ…ಧೋನಿ.. ಎಂದು ಅಭಿಮಾನಿಗಳು ಜೋರಾಗಿ ಕೂಗುತ್ತಾರೆ. ಒಂದು ವೇಳೆ ಎಂಎಸ್‌ ಧೋನಿ ಕ್ರೀಸ್‌ನಲ್ಲಿ ಇಲ್ಲವಾದರೂ ಎಂಎಸ್‌ ಧೋನಿ ಹೆಸರನ್ನು ಫ್ಯಾನ್ಸ್‌ ಜಪಿಸುತ್ತಿದ್ದಾರೆ. ಇದನ್ನು ನಾವು ಸಾಕಷ್ಟು ಬಾರಿ ನೋಡಿದ್ದೇವೆ.

ಅಂದಹಾಗೆ ಇಲ್ಲಿಯವರೆಗೂ ಆಡಿರುವ 12 ಪಂದ್ಯಗಳಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ 7 ಪಂದ್ಯಗಳಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ 4ರಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ 15 ಅಂಕಗಳನ್ನು ಕಲೆ ಹಾಕುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಇದರೊಂದಿಗೆ ಪ್ಲೇಆಫ್ಸ್‌ಗೆ ಬಹುತೇಕ ಅರ್ಹತೆ ಪಡೆದಿದೆ.

ಬುಧವಾರ ತವರು ಅಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ 27 ರನ್‌ಗಳಿಂದ ಗೆಲುವು ಪಡೆಯಿತು. ಈ ಪಂದ್ಯದಲ್ಲಿ 21 ರನ್‌ ಹಾಗೂ ಒಂದು ವಿಕೆಟ್‌ ಕಿತ್ತಿದ್ದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ವೇಳೆ ಮಾತನಾಡಿದ ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್‌ ಕ್ರಮಾಂಕದ ಬಗ್ಗೆ ಮಾತನಾಡಿದರು.

ಅಂದಹಾಗೆ ಸಿಎಸ್‌ಕೆ ಪರ ಎಂಎಸ್‌ ಧೋನಿಗೂ ಮುನ್ನ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಬ್ಯಾಟ್‌ ಮಾಡಿದ್ದರು. 21 ರನ್ ಗಳಿಸಿ ಜಡೇಜಾ ಔಟ್‌ ಆದ ಬಳಿಕ ಎಂಎಸ್‌ ಧೋನಿ ಕೇವಲ 9 ಎಸೆತಗಳಲ್ಲಿ ಅಜೇಯ 20 ರನ್‌ ಸಿಡಿಸಿದ್ದರು. ಈ ವೇಳೆ ಧೋನಿ…ಧೋನಿ ಎಂದು ಕರೆಯುತ್ತಿದ್ದರು. ಅಂದಹಾಗೆ ಎಂಎಸ್‌ ಧೋನಿ ಕ್ರೀಸ್‌ಗೆ ಬರುವುದಕ್ಕೂ ಮುನ್ನ ಕೂಡ ಧೋನಿ ಹೆಸರನ್ನು ಅಭಿಮಾನಿಗಳು ಜಪಿಸುತ್ತಿದ್ದರು.

ಪೋಸ್ಟ್‌ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ರವಿಂದ್ರ ಜಡೇಜಾ, “ನಾನು ಬ್ಯಾಟ್‌ ಮಾಡುತ್ತಿದ್ದ ವೇಳೆ ಮಾಹಿ ಭಾಯ್ ಹೆಸರನ್ನು ಜೋರಾಗಿ ಕೂಗುತ್ತಿದ್ದರು. ಒಂದು ವೇಳೆ ನಾನು ಎಂಎಸ್‌ ಧೋನಿಗೂ ಮುನ್ನ ಮೇಲಿನ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದರೆ, ನಾನು ಔಟ್‌ ಆಗಬೇಕೆಂದು ಅಭಿಮಾನಿಗಳು ಹಿಡಿ ಶಾಪ ಹಾಕುತ್ತಾರೆ. ಏನೇ ಆಗಲಿ ಪಂದ್ಯ ಗೆಲ್ಲುವುದರಿಂದ ನನಗೆ ತುಂಬಾ ಖುಷಿಯಾಗುತ್ತದೆ,” ಎಂದು ಹೇಳುವ ಮೂಲಕ ನಕ್ಕರು.

ಮೇ.14 ರಂದು ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ ಮುಂದಿನ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆದ್ದರೆ ಸಿಎಸ್‌ಕೆ ಪ್ಲೇಆಫ್ಸ್‌ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ.

andolanait

Recent Posts

ಪಂಚಮಸಾಲಿ ಹೋರಾಟದಲ್ಲಿ ಲಾಠಿ ಬೀಸಿದ ಪೊಲೀಸರಿಗೆ ಬಹುಮಾನ; ಜೆಡಿಎಸ್‌ ಆರೋಪ

ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್‌…

12 mins ago

ಕಲಬುರ್ಗಿ: ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…

14 mins ago

ವಿದೇಶಗಳಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರ: ಅಮರನಾಥ ಗೌಡ

ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…

18 mins ago

ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಚಂದ್ರು ಹೇಳಿಕೆ ಉಲ್ಲೇಖಿಸಿ ಟ್ವೀಟ್‌ ಮಾಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…

50 mins ago

ಕೃಷಿ ಜತೆಗೆ ಬೃಹತ್ ಕೈಗಾರಿಕಾ ಬೆಳವಣಿಗೆ ಅಗತ್ಯ; ಜಯಕುಮಾರ್

ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…

1 hour ago

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌…

1 hour ago