ನವದೆಹಲಿ: ಹಿಟ್ ಮ್ಯಾನ್ ರೋಹಿತ್ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಟೀಂ ಇಂಡಿಯಾ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎನ್ನುವ ವಿಶ್ವಾಸವಿದೆ. ಈ ಎರಡೂ ಟೂರ್ನಿಗಳಲ್ಲಿಯೂ ನಾವೇ ಚಾಂಪಿಯನ್ ಆಗುತ್ತೇವೆ ಎಂದು ಜೈ ಶಾ ಹೇಳಿದರು.
ನಾವು 2023ರ ಟೂರ್ನಿಯಲ್ಲಿ ನಾವು ಅಭೂತಪೂರ್ವ ಆಟವಾಡಿಯೂ ಫೈನಲ್‌ನಲ್ಲಿ ಸೋತಿದ್ದೆವು. ಈ ಬಾರಿ ನಾವು ಅಂದುಕೊಂಡಂತೆ ವಿಶ್ವಕಪ್ ಗೆದ್ದಿದ್ದೇವೆ. ಮತ್ತು ಈ ಗೆಲುವನ್ನು ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಗೆ ಅರ್ಪಿಸುವುದಾಗಿ ಜೈ ಶಾ ಹೇಳಿದ್ದಾರೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…