ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಇಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್.1, 2024 ರಿಂದ ಜಯ್ ಶಾ ಐಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 35 ವರ್ಷದ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಲಿದ್ದಾರೆ.
ಜಗನ್‌ಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್.ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಐಸಿಸಿಯನ್ನು ಮುನ್ನಡೆಸುವ ಭಾರತದಿಂದ ಐದನೇ ವ್ಯಕ್ತಿ ಜಯ್ ಶಾ ಆಗಲಿದ್ದಾರೆ.