ಕ್ರೀಡೆ

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್‌ ಶಾ

ಹೊಸದಿಲ್ಲಿ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ)ಯ ಅಧ್ಯಕ್ಷರಾಗಿ ಜಯ್‌ ಶಾ ಅವರು ಭಾನುವಾರ ಅಧಿಕೃತವಾಗಿ  ಅಧಿಕಾರ ಸ್ವೀಕರಿಸಿದರು. ಈ ಮೂಲಕ ಐಸಿಸಿ ಗದ್ದುಗೆಗೆ ಏರಿದ ಅತ್ಯಂತ ಕಿರಿಯ ಹಾಗೂ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಯ್‌ ಶಾ ಪಾತ್ರರಾಗಿದ್ದಾರೆ.

ಜಯ್‌ ಶಾ ಇದೇ ವರ್ಷದ ಆಗಸ್ಟ್‌ನಲ್ಲಿ ಐಸಿಸಿ ಅಧ್ಯ ಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಿಂದಿನ ಅಧ್ಯಕ್ಷರ ಅವಧಿ ಮುಗಿಯುವವರೆಗೆ ತಾತ್ಕಾಲಿಕವಾಗಿದ್ದ ಅವರ ಅಧಿಕಾರ ಈಗ ಅಧಿಕೃತವಾಗಿದೆ ಎಂದು ಐಸಿಸಿ  ಪ್ರಕಟಿಸಿದೆ.

ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್‌ ಅನ್ನು ಉತ್ತುಂಗಕ್ಕೇರಿಸಿದ ಜಯ್‌ ಶಾ, ಇದೀಗ ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದು, ಚಾಂಪಿಯನ್ಸ್‌ ಟ್ರೋಫಿ ಸಂಬಂಧ ಇರುವ ವಿವಾದ ಇವರ ಹಾಜರಾತಿಯಲ್ಲಿ ನಡೆಯಲಿದೆ.

2019ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೇರಿದ ಜಯ್‌ ಶಾ, 6 ವರ್ಷಗಳ ಕಾಲ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸಿದ್ದಾರೆ. ಭಾರತದಲ್ಲಿ ಐಪಿಎಲ್‌ ಜನಪ್ರಿಯಗೊಂಡು ವಿಶ್ವದಾದ್ಯಂತ ಮನ್ನಣೆ ಗಿಟ್ಟಿಸಿಕೊಳ್ಳವಲ್ಲಿ ಜಯ್‌ ಶಾ ಅವರ ಪಾತ್ರ ದೊಡ್ಡದಿದೆ. 2021 ಜನವರಿಯಿಂದ ಏಷ್ಯನ್‌ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷರು ಆಗಿದ್ದರು.

ಈಗ ಜಯ್‌ ಶಾ ಅವರ ಅಧಿಕಾರಾವಧಿಯಲ್ಲಿ ಮೊದಲ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಾಗಿದ್ದು, ಈ ಟೂರ್ನಿಯ ಪ್ರಾಯೋಜಕತ್ವಕ್ಕೆ ಸಂಬಂಧಿಸಿದಂತೆ ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಸಮಸ್ಯೆಯನ್ನು ಇವರ ಅಧ್ಯಕ್ಷತೆಯಲ್ಲಿ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

24 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

40 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

1 hour ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago