ಕ್ರೀಡೆ

ಜೈಸ್ವಾಲ್‌, ಅಶ್ವಿನ್‌ ಕಮಾಲ್‌: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಗೆ ಸರ್ವಪತನ ಕಂಡಿದ್ದ ವೆಸ್ಟ್‌ ಇಂಡೀಸ್‌ ತಂಡ, ಭಾರತದ ನೀಡಿದ 421 ರನ್‌ ಗಳ ಗುರಿಯನ್ನು ಬೆನ್ನಟ್ಟಲು ಮುಂದಾಯಿತು.  270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ.

ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಸಸ್ತಿಗೆ ಭಾಜನರಾದರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago