ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಮೆಕಲಮ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಬ್ರೆಂಡನ್ ಮೆಕಲಮ್ ಅವರ 10 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯಲ್ಲಿ ಮೊದಲಿಗರಾದರು.
ಮೆಕಲಮ್ 2013ರಲ್ಲಿ ವರ್ಷದಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದು ಟೆಸ್ಟ್ ಇತಿಹಾಸದಲ್ಲಿ ದಾಖಲೆಯಾಗಿತ್ತು. ಈಗ 12 ಟೆಸ್ಟ್‌ನಲ್ಲಿ 34 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಈ ಸಾಧನೆ ಮಾಡಿದ್ದಾರೆ.
ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಜೈಸ್ವಾಲ್ ಮೊದಲ ಸ್ಥಾನದಲ್ಲಿದ್ದರೆ, ಮೆಕಲಮ್ 33, ಬೆನ್ ಸ್ಟೋಕ್ಸ್ 26, ಗಿಲ್‌ಕ್ರಿಸ್ಟ್ 22, ಸೆಹ್ವಾಗ್ 22 ನಂತರದ ಸ್ಥಾನದಲ್ಲಿದ್ದಾರೆ.
2023ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್ ಭಾರತ ತಂಡದ ಪರವಾಗಿ ಆಡಿದ 15 ಟೆಸ್ಟ್ ಪಂದ್ಯಗಳಲ್ಲಿ 1495 ರನ್ ಗಳಿಸಿದ್ದು, ಇದರಲ್ಲಿ 3 ಶತಕ, 8 ಅರ್ಧ ಶತಕಗಳು ದಾಖಲಾಗಿವೆ. 214 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ. 60.94ರ ಸರಾಸರಿಯಲ್ಲಿ ಜೈಸ್ವಾಲ್ ಬ್ಯಾಟ್ ಬೀಸಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…