ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗಿ ಜೇಮ್ಸ್ ಆಂಡರ್‌ಸನ್ ಅವರು ತಮ್ಮ 21 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣಾ ಮೊದಲ ಟೆಸ್ಟ್ ಪಂದ್ಯದ ಬಳಿಕ ಬಲಗೈ ವೇಗಿ ಜೇಮ್ಸ್ ಆಂಡರ್‌ಸನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇಗ್ಲೆಂಡ್ ಪರವಾಗಿ ಅತಿಹೆಚ್ಚು ಟೆಸ್ಟ್ ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಯೊಂದಿಗೆ ಇಂಗ್ಲೆಂಡ್ ಕ್ರಿಕೆಟ್ ದಂತಕಥೆಯಾಗಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ ಜೇಮ್ಸ್.
21 ವರ್ಷಗಳ ಸುದೀರ್ಘ ಕ್ರಿಕೆಟ್ ಆಡುವುದು ಅದರಲ್ಲೂ ಓರ್ವ ಬೌಲರ್ ಆಗಿ ಉಳಿಯುವುದು ಸುಲಭದ ಮಾತಲ್ಲ. ಅದರಲ್ಲಿ ಎಲ್ಲರೂ ನಿಬ್ಬೆರಗಾಗುವಂತೆ ತಮ್ಮ ವೃತ್ತಿ ಬದುಕಿನಲ್ಲಿ ಬದುಕುವ ಮೂಲಕ ತಮ್ಮದೇ ಛಾಪನ್ನು ಮೂಡಿಸಿ ಹೊರನಡೆದಿದ್ದಾರೆ ಆಂಡರ್ಸನ್
ಆಂಡರ್‌ಸನ್ ತಮ್ಮ ವಿದಾಯದ ಪಂದ್ಯದಲ್ಲಿ 26.4 ಓವರ್ ಬೌಲ್ ಮಾಡಿದ ಜಿಮ್ಮಿ 58 ರನ್ ನೀಡಿ 4 ವಿಕೆಟ್ ಕಬಳಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್ ಕಬಳಿಸಿದ್ದ ಇವರು ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಕಬಳಿಸಿದರು.
ನಿವೃತ್ತಿಯೊಂದಿಗೆ ಹಲವು ದಾಖಲೆ ಬರೆದ ಜೆಮ್ಸ್ ಆಂಡರ್‌ಸನ್
ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ವೇಗಿ ಭಾಜನರಾಗಿದ್ದಾರೆ. ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ 188 ಪಂದ್ಯಗಳಿಂದ 26.43 ಸರಾಸರಿಯಲ್ಲಿ 704 ವಿಕೆಟ್ ಕಬಳಿಸಿದ್ದಾರೆ. ಹಾಗೂ ಒಟ್ಟಾರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಆಟಗಾರರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ ಜೇಮ್ಸ್.
ಟೆಸ್ಟ್ ಕ್ರಿಕೆಟ್‌ನಲ್ಲಿ ಬರೋಬ್ಬರಿ 40037 ಬಾಲ್‌ಗಳನ್ನು ಎಸೆಯುವ ಮೂಲಕ ಟೆಸ್ಟ್ ಕ್ರಿಕಟ್‌ನಲ್ಲಿ ನಲವತ್ತು ಸಾವಿರ ಎಸೆತಗಳನ್ನು ಎಸೆದ ಮೊದಲ ಬೌಲರ್ ಎಂಬ ವಿಶ್ವದಾಖಲೆಯನ್ನು ಬರೆದಿದ್ದಾರೆ. ಜತೆಗೆ ನಲವತ್ತು ಸಾವಿರ ಬಾಲ್‌ಗಳನ್ನು ಎಸೆದು ಕೇವಲ 18627 ರನ್ ನೀಡಿದ್ದಾರೆ.
1990ರ ಬಳಿಕ ಅತಿಹೆಚ್ಚು ವರ್ಷಗಳ ಕಾಲ ಟೆಸ್ಟ್ ಕ್ರಿಕೆಟ್‌ನಲ್ಲಿ ಆಟವಾಡಿದ ಏಕೈಕ ಆಟಗಾರ ಎಂಬ ಹಿರಿಮೆ ಜೇಮ್ಸ್ ಅವರ ಪಾಲಾಗಿದೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 21 ವರ್ಷ 53 ದಿನಗಳನ್ನು ಪೂರೈಸಿದ್ದಾರೆ.
ಎಲ್ಲಾ ಮೂರು ಮಾದರಿ ಸೇರಿದಂತೆ ಇಂಗ್ಲೆಂಡ್ ಪರವಾಗಿ ಹೆಚ್ಚು ವಿಕೆಟ್ ಕಿತ್ತ ಏಕೈಕ ಆಟಗಾರ ಎಂಬ ವಿಶ್ವದಾಖಲೆಯನ್ನು ಆಂಡರ್‌ಸನ್ ಬರೆದಿದ್ದಾರೆ. ಇವರು ಇಂಗ್ಲೆಂಡ್ ಪರವಾಗಿ ಒಟ್ಟು 501 ಪಂದ್ಯಗಳಿಂದ 991 ವಿಕೆಟ್ ಕಬಳಿಸಿದ್ದಾರೆ. ಅದರಲ್ಲಿ ಟೆಸ್ಟ್‌ನಲ್ಲಿ 704 ವಿಕೆಟ್, ಏಕದಿನ 269 ವಿಕೆಟ್ ಮತ್ತು ಟಿ20 ಯಲ್ಲಿ 18 ವಿಕೆಟ್ ಕಿತ್ತಿದ್ದಾರೆ.
ಅತಿಹೆಚ್ಚು ಬಾರಿ ಟೆಸ್ಟ್‌ನಲ್ಲಿ ನಾಟ್ಔಟ್ ಆಗಿ ಉಳಿದ ಆಟಗಾರ ಎಂಬ ವಿಶ್ವದಾಖಲೆಯೂ ಜೇಮ್ಸ್ ಆಂಡರ್‌ಸನ್ ಬಳಿಯಿದೆ. 188 ಟೆಸ್ಟ್ ಪಂದ್ಯಗಳಲ್ಲಿ ಬರೋಬ್ಬರಿ 114 ಬಾರಿ ನಾಟ್‌ಔಟ್ ಆಗಿದ್ದಾರೆ.
ವಿಶ್ವ ಕ್ರಿಕೆಟ್‌ನಲ್ಲಿ 50 ಸಾವಿರ ಎಸೆತೆಗಳನ್ನು ಪೂರೈಸಿದ ವಿಶ್ವದ ನಾಲ್ಕನೇ ಆಟಗಾರ ಆಂಡರ್‌ಸನ್ ಆಗಿದ್ದಾರೆ. ಇವರು 501 ಪಂದ್ಯಗಳಲ್ಲಿ 50043 ಎಸೆತಗಳನ್ನು ಎಸೆದಿದ್ದಾರೆ.
ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣಾ ಮೊದಲ ಟೆಸ್ಟ್ ಪಂದ್ಯದ ಸಾರಾಂಶ
ವೆಸ್ ಇಂಡೀಸ್ ಮೊದಲ ಇನ್ನಿಂಗ್ಸ್:
121/10 (41.4 ಓವರ್)
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್:
371/10 (90 ಓವರ್)
ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್:
136/10 (47 ಓವರ್)
ಫಲಿತಾಂಶ: ಇಂಗ್ಲೆಂಡ್‌ಗೆ ಇನ್ನಿಂಗ್ಸ್ ಹಾಗೂ 114 ರನ್ ಗಳ ಭರ್ಜರಿ ಜಯ.
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…