ಭಾರತದ ವೇಗಿ ಜಸ್‌ಪ್ರೀತ್ ಬುಮ್ರಾ ಐಸಿಸಿ ಬಿಡುಗಡೆಗೊಳಿಸಿರುವ ಅತ್ಯುತ್ತಮ ಬೌಲರ್ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಅತ್ಯುತ್ತಮ ಟೆಸ್ಟ್ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಮೊದಲ ವೇಗಿ ಎಂಬ ದಾಖಲೆಯನ್ನು ಬುಮ್ರಾ ಬರೆದಿದ್ದಾರೆ.
ಟೆಸ್ಟ್ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಬುಮ್ರಾ ಏಕದಿನ ಹಾಗೂ ಟಿ ಟ್ವೆಂಟಿ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿಯೂ ಅಗ್ರಸ್ಥಾನದಲ್ಲಿದ್ದು, ಎಲ್ಲಾ ಮಾದರಿಯ ಶ್ರೇಯಾಂಕ ಪಟ್ಟಿಯಲ್ಲೂ ಏಕಕಾಲದಲ್ಲಿ ಅಗ್ರಸ್ಥಾನದಲ್ಲಿರುವ ವಿಶ್ವದ ಮೊದಲ ಬೌಲರ್ ಎಂಬ ದಾಖಲೆಯನ್ನು ಬರೆದಿದ್ದಾರೆ.