ನವದೆಹಲಿ: ರಂಜಾನ್ ಮಾಸದಲ್ಲಿ ರೋಜಾ (ಉಪವಾಸ) ಪಾಲಿಸುತ್ತಿಲ್ಲ ಎಂಬ ಟೀಕೆಗಳಿಗೆ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಚಿತ್ರ ಕಥೆಗಾರ ಜಾವೇದ್ ಅಖ್ತರ್ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮತಾಂಧ ಮೂರ್ಖರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಕರಾತ್ಮಕ ವಿಚಾರಗಳತ್ತ ಗಮನ ಹರಿಸದೆ, ಫೈನಲ್ ಪಂದ್ಯದ ಕಡೆ ಗಮನ ನೀಡಬೇಕೆಂದು ಶಮಿಗೆ ಸಲಹೆ ನೀಡಿದ್ದಾರೆ.
ಈ ವಿಚಾರದಲ್ಲಿ ನೀವು ತಲೆಹಾಕುವ ಅಗತ್ಯವಿಲ್ಲ. ಭಾರತ ತಂಡದ ಶ್ರೇಷ್ಠ ಆಟಗಾರರಲ್ಲಿ ನೀವು ಒಬ್ಬರು ಎನ್ನುವುದು ನಮಗೆ ಖುಷಿಯ ವಿಷಯ. ನಿಮಗೆ ಮತ್ತು ನಿಮ್ಮ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.
ಶಮಿ ಅವರು, ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದ ವೇಳೆ ಪಾನೀಯ ಸೇವಿಸಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.
ಭಾರತ ಹಾಗು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯವು ನಾಳೆ (ಮಾ.9ರಂದು) ದುಬೈನಲ್ಲಿ ನಡೆಯಲಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…