ಕ್ರೀಡೆ

ಜಯ್​ ಶಾ ಮುಡಿಗೆ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿ

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಸಾಲು ಸಾಲು ಸವಾಲಲುಗಳು ಎದುರಾದರು, ಅವುಗಳನ್ನೆಲ್ಲಾ ಮೆಟ್ಟಿನಿಂತು ಯಶಸ್ವಿಯಾಗಿ ಟೂರ್ನಿ ನಡೆಸಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ೨೦೨೩ ನೇ ಸಾಲಿನ ಸ್ಪೋರ್ಟ್ಸ್‌ ಬಿಸಿನೆಸ್‌ ಲೀಡರ್‌ ಆಫ್‌ ದಿ ಇಯರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸುದ್ದಿಯನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು. ‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಈ ವಿಶೇಷ ಗೌರವವನ್ನು ಪಡೆದ ಮೊದಲ ವ್ಯಕ್ತಿ ಜಯ್ ಶಾ. ಅವರು ನಿಜವಾಗಿಯೂ ಈ ಗೌರವಕ್ಕೆ ಅರ್ಹರು ಎಂದು ಬರೆದುಕೊಂಡಿದೆ.

2019 ರಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಆಯ್ಕೆಯಾದರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆದ ಏಷ್ಯಾಕಪ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಶಾ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ಒಲಿದಿದೆ.

ಜಯ್ ಶಾ ತಮ್ಮ ನಾಯಕತ್ವದ ಗುಣಗಳಿಂದ ವಿಶ್ವ ಕ್ರಿಕೆಟ್‌ನ ಮೇಲೂ ಪ್ರಭಾವ ಬೀರಿದರು. ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ. ಕ್ರಿಕೆಟ್‌ಗೆ ಅವರ ಸೇವೆಯನ್ನು ಗುರುತಿಸಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಅವರನ್ನು ಅತ್ಯುತ್ತಮ ಕ್ರೀಡಾ ಉದ್ಯಮ ನಾಯಕ ಎಂದು ಗುರುತಿಸಿದೆ.

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯ ಭಾರತದ ಪಂದ್ಯವನ್ನು ತಟಸ್ಥ ತಾಣದಲ್ಲೇ ನಡೆಸಬೇಕೆಂದು ಪಟ್ಟು ಹಿಡಿದಿದ್ದ ಜಯ್​ ಶಾ ಇದರಲ್ಲಿ ಯಶಸ್ಸು ಕೂಡ ಕಂಡಿದ್ದರು. ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು. ಯಾವುದೇ ಒಂದು ನಿರ್ಧಾರವನ್ನು ಕೈಗೊಂಡರೂ ಅದನ್ನು ಸಾಧಿಸುವವರೆಗೆ ಛಲ ಬಿಡದ ಅವರು ಕ್ರಿಕೆಟ್​ ಕ್ಷೇತ್ರದಲ್ಲಿ ಅನೇಕ ಹೊಸ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

andolanait

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

5 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

1 hour ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago