ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ಣಗೊಳಿಸಿದ ಜೋಸ್‌ ಬಟ್ಲರ್‌!

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದಾರೆ.

ಪ್ರಸ್ತುತ ವಿಟಾಲಿಟಿ ಬ್ಲಾಸ್ಟ್‌ ಟಿ20 ಟೂರ್ನಿಯಲ್ಲಿ ಲ್ಯಾಂಕಾಷೈರ್‌ ಲೈಟನಿಂಗ್‌ ಪರ ಆಡುತ್ತಿರುವ ಜೋಸ್‌ ಬಟ್ಲರ್‌ ಅವರು ಡರ್ಬಿಷೈರ್‌ ಫಾಲ್ಕನ್ಸ್ ವಿರುದ್ಧದ ಪಂದ್ಯದಲ್ಲಿ 36 ಎಸೆತಗಳಲ್ಲಿ 83 ರನ್‌ ಸಿಡಿಸಿದರು. ಆ ಮೂಲಕ ಲ್ಯಾಂಕಾಷೈರ್‌ ತಂಡದ 27 ರನ್‌ಗಳ ಗೆಲುವಿಗೆ ನೆರವಾದರು. ಈ ಪಂದ್ಯದ ಗೆಲುವಿನ ಮೂಲಕ ಲ್ಯಾಂಕಾಷೈರ್‌ ತಂಡ ಎರಡು ನಿರ್ಣಾಯಕ ಅಂಕಗಳನ್ನು ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ಸ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.

https://twitter.com/i/status/1672577388327186433

ಮಳೆ ಅಡ್ಡಿಯಾಗಿದ್ದರಿಂದ ಪಂದ್ಯ ಸ್ವಲ್ಪ ತಡವಾಗಿ ಆರಂಭವಾಗಿತ್ತು. ಜೋಸ್‌ ಬಟ್ಲರ್‌ ಅವರ ಇನಿಂಗ್ಸ್‌ನಲ್ಲಿ 6 ಭರ್ಜರಿ ಸಿಕ್ಸರ್‌ಗಳಿಂದ ಕೂಡಿತ್ತು. ಅಷ್ಟೇ ಅಲ್ಲದೆ ತಮ್ಮ ರಾಷ್ಟ್ರೀಯ ತಂಡದ ಸಹ ಆಟಗಾರ ಲಿಯಾಮ್‌ ಲಿವಿಂಗ್‌ಸ್ಟೋನ್ ಅವರ ಜೊತೆ ಮುರಿಯದ ಎರಡನೇ ವಿಕೆಟ್‌ಗೆ ಜೋಸ್‌ ಬಟ್ಲರ್‌ ಅವರು 41 ಎಸೆತಗಳಲ್ಲಿ 101 ರನ್‌ ಸಿಡಿಸಿದ್ದರು. ಆ ಮೂಲಕ ಲ್ಯಾಂಕಾಷೈರ್‌ ಲೈಟನಿಂಗ್‌ ತಂಡ 15 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆ ಹಾಕಿತು.

ಝಮಾನ್‌ ಖಾನ್ ಅವರ ಬೌಲಿಂಗ್‌ನಲ್ಲಿ ಕ್ಯಾಚಿತ್ತು ಔಟ್‌ ಆದ ಜೋಸ್‌ ಬಟ್ಲರ್‌ ಅವರು ಕೇವಲ 17 ಅಂತರದಲ್ಲಿ ಶತಕ ವಂಚಿತರಾದರು. ಇದರ ಹೊರತಾಗಿಯೂ ಅವರು ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದರು. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಗಳಿಸಿದ ವಿಶ್ವದ ಒಂಬತ್ತನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 14,562 ರನ್‌ಗಳನ್ನು ಕಲೆ ಹಾಕಿರುವ ವೆಸ್ಟ್ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್ ಅವರು ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. 12,528 ರನ್‌ ಗಳಿಸಿರುವ ಶೋಯೆಬ್‌ ಮಲಿಕ್‌ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವಿಂಡೀಸ್‌ನ ಮತ್ತೊಬ್ಬ ದಿಗ್ಗಜ ಕೈರೊನ್‌ ಪೊಲಾರ್ಡ್‌ ಅವರು 12,175 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ 11,965 ರನ್‌ಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದ ಎರಡು ಸ್ಥಾನಗಳಲ್ಲಿ ಡೇವಿಡ್‌ ವಾರ್ನರ್‌ ಹಾಗೂ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ.

ಪಂದ್ಯದ ಬಳಿಕ ಇಎಸ್‌ಪಿಎನ್‌ ಕ್ರಿಕ್‌ಇನ್ಪೋ ಜೊತೆ ಮಾತನಾಡಿದ ಜೋಸ್‌ ಬಟ್ಲರ್‌ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. “ನನ್ನ ಬ್ಯಾಟಿಂಗ್ ಅನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ಲಿಯಾಮ್‌ ಲಿವಿಂಗ್‌ಸ್ಟೋನ್‌ ಜೊತೆ ಬ್ಯಾಟಿಂಗ್ ತುಂಬಾ ಮೋಜಿನಿಂದ ಕೂಡಿತ್ತು. ಅವರು ಬೌಲರ್‌ಗಳ ಮೇಲೆ ಸಾಕಷ್ಟು ಒತ್ತಡವನ್ನು ಹಾಕಿದ್ದರು. ಎಲ್ಲ ಸಮಯದಲ್ಲಿಯೂ ರನ್‌ ರೇಟ್‌ ಏರಿಕೆ ಮಾಡುವಂತೆ ಇವತ್ತಿನ ರಾತ್ರಿ ಕೂಡ ನಾವು ರನ್‌ ರೇಟ್‌ ಏರಿಸಿದ್ದೇವೆ,” ಎಂದು ಹೇಳಿದ್ದಾರೆ.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

2 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

2 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago