ವಿಶಾಖಪಟ್ಟಣಂ : ಜೋಶ್ ಇಂಗ್ಲಿಸ್(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್ ಭಾರತಕ್ಕೆ 208 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ ಈ ಬೈಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ 31 ರನ್ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್‌ನಲ್ಲಿಯೇ ಮ್ಯಾಥ್ಯೂ ಶಾರ್ಟ್ (13) ಕ್ಲೀನ್ ಬೋಲ್ಡ್ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್ ಸ್ಮಿತ್ ಹಾಗೂ ಜೋಶ್ ಇಂಗ್ಲಿಸ್ ಮುರಿಯದ 130 ರನ್‌ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್ ಇಂಗ್ಲಿಸ್ ತಾವೆದುರಿಸಿದ 50 ಎಸೆತಗಳಲ್ಲಿ 11 ಬೌಂಡರಿ ಹಾಗೂ 8೮ ಸಿಕ್ಸರ್ ಸಹಿತ 110 ರನ್ ಕಲೆ ಹಾಕಿದರು. ಇತ್ತ ಸ್ಟೀವ್ ಸ್ಮಿತ್ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಕಲೆಹಾಕಿ ತಂಡ 200 ಗಡಿ ದಾಟಲು ಸಹಕರಿಸಿದರು.
ನಂತರ ಬಂದ ಸ್ಟೋಯ್ನಿಸ್ (7), ಟಿಮ್ ಡೇವಿಡ್(19) ರನ್ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 3208ನ್ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದರು.
ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…