ಕ್ರೀಡೆ

ಕೇನ್‌ ವಿಲಿಯಮ್ಸ್‌ ದಾಖಲೆ ಉಡೀಸ್‌: ರೋಹಿತ್‌ ಮುಡಿಗೆ ಮತ್ತೊಂದು ಗರಿ

ಅಹ್ಮದಾಬಾದ್‌ : ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್‌ ತಂಡದ ನಾಯಕ ಕೇನ್‌ ವಿಲಿಯಮ್ಸ್‌ ಅವರ ಹಿಂದಿನ ದಾಖಲೆಯನ್ನ ಮುರಿಯುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ.

ರೋಹಿತ್‌ ಶರ್ಮಾ ಈ ಆವೃತ್ತಿಯಲ್ಲಿ ಹಲವಾರು ದಾಖಲೆಗಳನ್ನು ತಮ್ಮ ಮುಡಗೇರಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಫೈನಲ್‌ ಪಂದ್ಯದಲ್ಲಿ ಹಿಟ್‌ ಮ್ಯಾನ್‌ 31 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್‌ ಸಹಿತ 47 ರನ್‌ ಕಲೆಹಾಕಿ 597 ರನ್‌ ಪೇರಿಸಿದರು. ಇದರಿಂದಾಗಿ ನಾಯಕನೊಬ್ಬನ ಗರಿಷ್ಠ ವಯಕ್ತಿಕ ರನ್‌ ಗಳಿಕೆಯಲ್ಲಿ ರೋಹಿತ್‌ ಶರ್ಮಾ ಕೇನ್‌ ಇಂದಿಕ್ಕಿ ಅಗ್ರಸ್ಥಾನ ಪಡೆದಿದ್ದಾರೆ.

ಪಂದ್ಯದಲ್ಲಿ 29 ರನ್ ಗಳಿಸುತ್ತಿದ್ದಂತೆ ರೋಹಿತ್ ಶರ್ಮಾ, 579 ರನ್‌ಗಳೊಂದಿಗೆ ಏಕೈಕ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು. 2019 ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 578 ರನ್ ಗಳಿಸಿ ವಿಶ್ವಕಪ್ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ.

ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕರು
ರೋಹಿತ್ ಶರ್ಮಾ-597 ರನ್- ಭಾರತ-2023
ಕೇನ್ ವಿಲಿಯಮ್ಸನ್- 578 ರನ್- ನ್ಯೂಜಿಲೆಂಡ್-2019
ಮಹೇಲಾ ಜಯವರ್ಧನೆ-548 ರನ್ – ಶ್ರೀಲಂಕಾ-2007
ರಿಕಿ ಪಾಂಟಿಂಗ್- 539 ರನ್- ಆಸ್ಟ್ರೇಲಿಯಾ- 2007
ಆರೋನ್ ಫಿಂಚ್- 507 ರನ್- 2019

ಕ್ರಿಸ್ ಗೇಲ್‌ರ ಸಿಕ್ಸರ್‌ಗಳ ದಾಖಲೆಯೂ ಪುಡಿಪುಡಿ : 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸಿಕ್ಸರ್‌ಗಳ ಸುರಿಮಳೆ (54) ಹರಿಸಿರುವ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ 3 ಸಿಕ್ಸರ್ ಸಿಡಿಸುವ ಮೂಲಕ 86 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ವಂ ಘೋಷಿತ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ (85) ನಿರ್ಮಿಸಿದ್ದ ಸಿಕ್ಸರ್‌ಗಳ ದಾಖಲೆಯನ್ನು ರೋಹಿತ್‌ ಶರ್ಮಾ ಮುರಿದಿದ್ದಾರೆ. ಏಕೈಕ ತಂಡದ ವಿರುದ್ಧ ಅತಿಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಈಗ ರೋಹಿತ್‌ ಪಾಲಾಗಿದೆ.

ಏಕೈಕ ತಂಡದ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ಸ್:
86- ರೋಹಿತ್ ಶರ್ಮಾ- ಭಾರತ- ಆಸ್ಟ್ರೇಲಿಯಾ ವಿರುದ್ಧ
85- ಕ್ರಿಸ್ ಗೇಲ್- ವೆಸ್ಟ್ ಇಂಡೀಸ್- ಇಂಗ್ಲೆಂಡ್ ವಿರುದ್ಧ
63- ಶಾಹಿದ್ ಅಫ್ರಿದಿ- ಪಾಕಿಸ್ತಾನ- ಶ್ರೀಲಂಕಾ ವಿರುದ್ಧ
53- ಸನತ್ ಜಯಸೂರ್ಯ- ಶ್ರೀಲಂಕಾ- ಪಾಕಿಸ್ತಾನ ವಿರುದ್ಧ

andolanait

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

32 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago