Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಟಿ.20 ಕ್ರಿಕೆಟ್‌ಗೆ ಕೇನ್‌ ವಿಲಿಯಮ್ಸನ್‌ ವಿದಾಯ

ಮುಂಬೈ: ನ್ಯೂಝಿಲೆಂಡ್‌ ಕ್ರಿಕೆಟ್‌ ತಂಡದ ಹಿರಿಯ ಬ್ಯಾಟರ್‌ ಹಾಗೂ ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್‌ ತಮ್ಮ ನಿವೃತ್ತಿ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದರು.

ಇದರೊಂದಿಗೆ ಫೆಬ್ರವರಿಯಲ್ಲಿ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್‌ ಪರ ವಿಲಿಯಮ್ಸನ್‌ ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರು ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್‌ ಪರ ಕಣಕ್ಕಿಳಿಯುತ್ತಿದ್ದೇನೆ. ಈಗ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ. ಹೀಗಾಗಿ ಟಿ20 ಕ್ರಿಕೆಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಆದರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇನ್ನೂ ಕೆಲವು ವರ್ಷಗಳ ಕಾಲ ಆಡಲು ಉತ್ಸುಕನಾಗಿದ್ದೇನೆ ಎಂದು ವಿಲಿಯಮ್ಸನ್‌ ಭಾವುಕವಾಗಿ ಹೇಳಿದ್ದಾರೆ.

Tags:
error: Content is protected !!