ಮುಂಬೈ: ನ್ಯೂಝಿಲೆಂಡ್ ಕ್ರಿಕೆಟ್ ತಂಡದ ಹಿರಿಯ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್ ತಮ್ಮ ನಿವೃತ್ತಿ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದರು.
ಇದರೊಂದಿಗೆ ಫೆಬ್ರವರಿಯಲ್ಲಿ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಪರ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಈಗ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ. ಹೀಗಾಗಿ ಟಿ20 ಕ್ರಿಕೆಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇನ್ನೂ ಕೆಲವು ವರ್ಷಗಳ ಕಾಲ ಆಡಲು ಉತ್ಸುಕನಾಗಿದ್ದೇನೆ ಎಂದು ವಿಲಿಯಮ್ಸನ್ ಭಾವುಕವಾಗಿ ಹೇಳಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…