ಕ್ರೀಡೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಕನ್ನಡಿಗ

ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು.

ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ ನಿರ್ಮಿಸಿದರು.

ನಾಲ್ಕು ದಿನಗಳ ಈ ಪಂದ್ಯದಲ್ಲಿ 46 ಬೌಂಡರಿ ಹಾಗೂ ಮೂರು ಸಿಕ್ಸ‌ರ್ ಗಳೊಂದಿಗೆ 404 ರನ್ ಗಳಿಸಿದ ಪ್ರಖರ್, ಅಜೇಯವಾಗುಳಿದರು. ಇದರ ಬೆನ್ನಿಗೇ ಕರ್ನಾಟಕ ತಂಡವು ತಂಡದ ಮೊತ್ತ 8 ವಿಕೆಟ್ ನಷ್ಟಕ್ಕೆ 890 ರನ್ ಆಗಿದ್ದಾಗ ಡಿಕೇರ್ ಮಾಡಿಕೊಂಡಿತು.

ಶಿವಮೊಗ್ಗದ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಬೃಹತ್ 510 ರನ್ ಗಳ ಮುನ್ನಡೆ ಸಾಧಿಸಿದ ಕರ್ನಾಟಕ ತಂಡವು, ನಾಲ್ಕನೆಯ ದಿನ ಡಿಪ್ಲೇರ್ ಮಾಡಿಕೊಂಡಿತು. ನಂತರ ಉಭಯ ತಂಡಗಳು ಡ್ರಾಗೆ ಸಹಮತ ವ್ಯಕ್ತಪಡಿಸಿದವು. ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಕರ್ನಾಟಕ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು.

ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡವು ಮುಂಬೈ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆಯುಷ್ ಮಹಾತ್ರೆ ಅವರ 145 ರನ್ ಗಳ ನೆರವಿನಿಂದ ಮುಂಬೈ ತಂಡವು 380 ರನ್ ಗಳ ಉತ್ತಮ ಮೊತ್ತವನ್ನೇ ಪೇರಿಸಿತು.

ಕರ್ನಾಟಕದ ಪರವಾಗಿ ಹಾರ್ದಿಕ್ ರಾಜ್ 80 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಮರ್ಥ್ ಎನ್. ತಲಾ ಎರಡು ವಿಕೆಟ್ ಪಡೆದರು.

ಆದರೆ, ಪ್ರಖ‌ರ್ ಚತುರ್ವೇದಿಯ ಅಜೇಯ 404 ರನ್ ಗಳ ಕಾರಣಕ್ಕೆ ಪಂದ್ಯದ ಲೆಕ್ಕಾಚಾರವೆಲ್ಲ ತಲೆಕೆಳಕಾಗಿ, ಕರ್ನಾಟಕ ತಂಡವು ಫೈನಲ್ ಪಂದ್ಯದ ಮೇಲೆ ಬಲವಾದ ನಿಯಂತ್ರಣ ಸಾಧಿಸಿತು. ಕೂಚ್ ಬಿಹಾರ್ ಕ್ರೀಡಾಕೂಟದ ಫೈನಲ್ ಪಂದ್ಯದಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಪ್ರಪ್ರಥಮ ಬ್ಯಾಟರ್ ಎಂಬ ಹಿರಿಮೆಗೆ ಪ್ರಖರ್ ಪಾತ್ರವಾದರು.

ಕರ್ನಾಟಕ ತಂಡದ ಮತ್ತೊಬ್ಬ ಬ್ಯಾಟರ್ ಹರ್ಶಿಲ್ ಧರ್ಮಾನಿ ಕೂಡಾ 169 ರನ್ ಗಳಿಸಿದರಾದರೂ, ಪ್ರಖ‌ರ್ ಅಮೋಘ ಆಟದೆದುರು ಮುಂಬೈ ಪ್ರದರ್ಶನ ನಿಲ್ಲದಾಯಿತು. ಅಂತಿಮವಾಗಿ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

andolanait

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

1 hour ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

1 hour ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

1 hour ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

1 hour ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

10 hours ago