ಕ್ರೀಡೆ

Karnataka Budget 2023: ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ಯೋಜನೆ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. ಇದರಲ್ಲಿ ಕ್ರೀಡಾ ವಲಯವೂ ಸೇರಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ನಾನಾ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ. ಹಾಗಿದ್ದರೆ ಬೊಮ್ಮಾಯಿ ಮಂಡಿಸಿದ ಬಜೆಟ್​ನಲ್ಲಿ ಕ್ರೀಡಾ ವಿಭಾಗಕ್ಕೆ ಸಿಕ್ಕಿದ್ದೇನು ಎಂಬುದರ ಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು. ಬಾಸ್ಕೆಟ್ ಬಾಲ್ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.

ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು. ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.

andolanait

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

7 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

7 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

7 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

7 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

7 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

8 hours ago